ಶಹಾಪುರ: ‘ಮಹಿಳೆ ಕೇವಲ ಕುಟುಂಬದ ಬೆನ್ನೆಲಬು ಮಾತ್ರವಲ್ಲ. ದೇಶಾಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಅವರು ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕವಾಗಿ ಅಭಿವೃದ್ಧಿಯಾದರೆ ದೇಶವೂ ಅಭಿವೃದ್ಧಿಗೊಳ್ಳಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಾಡಿಯಾ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಜರುಗಿದ ‘ಅಂತರರಾಷ್ಟ್ರೀಯ ಮಹಿಳಾ ದಿನ ಮತ್ತು ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ನಿಮಿತ್ತ ಮಹಿಳಾ ಸಾಧಕಿಯರಿಗೆ ಅಭಿನಂದನಾ ಸಮಾರಂಭ’ದಲ್ಲಿ ಅವರು ಮಾತನಾಡಿದರು.

‘ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಬಾಲಕಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದದ್ದು ಸಂತಸದಾಯಕ. ಮಹಿಳೆಯರ ಸಾಧನೆಯು ಬದಲಾವಣೆ ಮತ್ತು ಪ್ರಗತಿಯ ಸಂಕೇತ. ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂಜೀವಿನ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಆದ್ಯತೆ ನೀಡಬೇಕು’ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಶರಭೈ ಮಾತನಾಡಿ, ‘ಪ್ರತಿಯೊಬ್ಬರ ಯಶಸ್ಸಿಗೆ ಮಹಿಳೆಯೇ ಸಾಧಕ ಶಕ್ತಿಯಾಗಿದ್ದಾಳೆ. ಈಚೆಗೆ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ನಮ್ಮ ಜಿಲ್ಲೆಯಿಂದ ಆಯ್ಕೆಯಾದ ಎಲ್ಲರ ಹಿಂದೆಯೂ ಕುಟುಂಬದ ಸಹಕಾರವಿದೆ’ ಎಂದರು.

ಉಪನ್ಯಾಸಕಿ ಶಂಕ್ರಮ್ಮ ಪಾಟೀಲ ಮಾತನಾಡಿ, ‘ಇಂದು ಮಹಿಳೆ ಮನೆಯ ಚೌಕಟ್ಟನ್ನು ದಾಟಿ, ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆಯ ಮೂಲಕ ಛಾಪು ಮೂಡಿಸುತ್ತಿದ್ದಾಳೆ. ದೇಶದ ಅರ್ಧ ಜನಸಂಖ್ಯೆಯಲ್ಲಿರುವ ಮಹಿಳೆಯರ ಅಭಿವೃದ್ಧಿಯು ರಾಷ್ಟ್ರದ ನಿಜವಾದ ಅಭಿವೃದ್ಧಿ’ ಎಂದರು.

ಕಾರ್ಯಕ್ರಮದಲ್ಲಿ ಈಚೆಗೆ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಸಾಧನೆ ಮಾಡಿದವರ ತಾಯಂದಿರ ಸನ್ಮಾನ, ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗೆ ಉತ್ತಮ ಸೇವಾ ಪ್ರಶಸ್ತಿ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಪ್ರಸಸ್ತಿ ಪತ್ರ ವಿತರಣೆ ಮತ್ತು ಸನ್ಮಾನ ಮಾಡಲಾಯಿತು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಯಪ್ಪಗೌಡ ಹುಡೇದ, ಎಡಿ ಅಕ್ಕನಾಗಮ್ಮ, ಯೋಜನಾಧಿಕಾರಿ ಶಾರದಮ್ಮ ನಾಗ್ಲೋಟ ಸೇರಿದಂತೆ ಪಿಡಿಒ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-30-813518226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.