ಶಿಡ್ಲಘಟ್ಟ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಎಸ್.ಎಸ್. ರೇಂಜರ್ಸ್ ಮತ್ತು ರೋವರ್ಸ್ ರೆಡ್ ಕ್ರಾಸ್ ಪರಂಪರೆ ಕೂಟ ಮತ್ತು ಇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ಮಂಗಳವಾರ ನಡೆಯಿತು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮತ್ತು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿದಾಗ ಮಾತ್ರವೇ ಕುಟುಂಬಗಳು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ. ಇಲ್ಲಿ ಶ್ರಮಪಟ್ಟರೆ ಮಾತ್ರವೇ ವಿದ್ಯಾರ್ಥಿಗಳ ಜೀವನ ನೆಮ್ಮದಿಯಾಗಿರಲಿದೆ’ ಎಂದು ಹೇಳಿದರು.

ಚಿಮುಲ್ ನಿರ್ದೇಶಕ ಹುಜಗೂರು ರಾಮಯ್ಯ ಮಾತನಾಡಿ, ದೇಶದ ಅಭಿವೃದ್ಧಿಯು ಯುವಕರ ಮೇಲೆ ಅವಲಂಭಿಸಿದೆ. ವಿದ್ಯಾವಂತರಾಗಿ ಭವಿಷ್ಯದಲ್ಲಿ ಉತ್ತಮ ಸ್ಥಾನಮಾನ ಪಡೆದು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆ ಮೂಲಕ ಸಮಾಜ ನಮ್ಮನ್ನು ಗುರುತಿಸುವಂತಾಗಬೇಕು ಎಂದರು.

ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಹೆಚ್ಚು ಅಂಕ ಪಡೆದ ಪ್ರತಿಭಾವಂತ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಿ. ಮುರಳಿ ಆನಂದ್, ಎನ್ಎಸ್ಎಸ್. ಕಾರ್ಯಕ್ರಮಾಧಿಕಾರಿ ಡಾ. ಆದಿನಾರಾಯಣ್, ಸಾಂಸ್ಕೃತಿಕ ಸಂಚಾಲಕ ಡಾ.ಷಫೀಅಹಮದ್, ಉಪನ್ಯಾಸಕ ಡಾ.ಶಿವಶಂಕರಿ, ಡಾ.ಎಂ.ಸುನೀತಾ, ಡಾ.ಜ್ಯೋತಿ, ಡಾ.ರವಿಕುಮಾರ್.ಬಿ, ಡಾ.ವಿಜಯೇಂದ್ರಕುಮಾರ್, ಡಾ.ಸುಗುಣ, ಡಾ.ಜ್ಯೋತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-16-507034334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.