ಶಿಡ್ಲಘಟ್ಟ: ‘ವಿಶೇಷಚೇತನರಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆ ಹೆಚ್ಚಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ’ ಎಂದು ಎಸ್ಸಿಐ ನವಜೀವನ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಮುನಿರಾಜು ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ನವಜೀವನ ಸೇವಾ ಸಂಸ್ಥೆ, ಮಾರ್ಗದರ್ಶಿ ವಿಕಲಚೇತನರ ಸೇವಾ ಸಂಸ್ಥೆ ಹಾಗೂ ಸ್ಟೇಟ್ಸ್ಟ್ರೀಟ್ ಕಂಪನಿಯ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ಅಂಗವಿಕಲರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.

ಬೆನ್ನುಹುರಿ ಅಪಘಾತಕ್ಕೆ ಒಳಗಾದ ಬಹುತೇಕರು ಮನೆಯಲ್ಲಿಯೇ ಉಳಿದುಕೊಳ್ಳುವುದರಿಂದ ಒಂಟಿತನ, ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಿದೆ ಎಂದರು.

ಕ್ರೀಡಾಕೂಟದಲ್ಲಿ ಸುಮಾರು 30ಕ್ಕೂ ಹೆಚ್ಚು ಅಂಗವಿಕಲರು ಪಾಲ್ಗೊಂಡಿದ್ದರು.

ಎಸ್ಸಿಐ ನವಜೀವನ ಸೇವಾ ಸಂಸ್ಥೆ ಕಾರ್ಯದರ್ಶಿ ಕೆ.ಪಿ.ರವಿ, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ರಾಮಾಂಜಿ, ಮಾರ್ಗದರ್ಶಿ ವಿಕಲಚೇತನರ ಸೇವಾ ಸಂಸ್ಥೆ ಕಾರ್ಯದರ್ಶಿ ಗೀತಾಮೃತ, ಖಜಾಂಚಿ ವೆಂಕಟಾಚಲಂ, ಎಪಿಡಿ ಸಂಸ್ಥೆಯ ಗಿರಿಜಾ, ನಿರ್ದೇಶಕಿ ನೇತ್ರ, ಸ್ಟೇಟ್ ಸ್ಟ್ರೀಟ್ ಕಂಪನಿಯ 20 ಸ್ವಯಂ ಸೇವಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-16-2023970288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.