ಶಿಡ್ಲಘಟ್ಟ: ತಾಲ್ಲೂಕಿನ ಭಕ್ತರಹಳ್ಳಿಯ ಬಿಎಂವಿ ವಿದ್ಯಾಸಂಸ್ಥೆಯಲ್ಲಿ ಬಿಎಂವಿ ಎಜುಕೇಷನ್ ಟ್ರಸ್ಟ್ ಮತ್ತು ಸಮಾಜವಾದಿ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ರಾಷ್ಟ್ರ ಸೇವಾದಳದ 8 ದಿನಗಳ ವಸತಿ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್. ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗಿದೆ, ಸಾಮಾಜಿಕ ಕಳಕಳಿ ಮತ್ತು ಸೌಹಾರ್ದತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ವಿದ್ಯಾರ್ಥಿದೆಸೆಯಿಂದಲೇ ಸಿದ್ಧರಾಗಬೇಕು’ ಎಂದು ಹೇಳಿದರು.

ಮಕ್ಕಳು ದೇಶಪ್ರೇಮದ ಜೊತೆಗೆ ಎಲ್ಲರೂ ಒಂದೇ ಎಂಬ ಭಾವನೆ ಬೆಳೆಸಿಕೊಂಡು, ಜಾತಿ-ಮತ ಭೇದಗಳನ್ನು ಮರೆತು ಮಾನವೀಯತೆಯಿಂದ ಬದುಕಬೇಕು. ಆಗ ಮಾತ್ರ ಸದೃಢ ಭಾರತ ನಿರ್ಮಾಣ ಸಾಧ್ಯ. ಶಾಲಾ ಹಂತದಿಂದಲೇ ‘ನಾವೆಲ್ಲರೂ ಮೊದಲು ಭಾರತೀಯರು’ ಎಂಬ ವಿಶಾಲ ಮನೋಭಾವ ರೂಢಿಸಿಕೊಳ್ಳುವುದು ಇಂದಿನ ಅಗತ್ಯ ಎಂದರು.

ತಹಶೀಲ್ದಾರ್ ಗಗನಸಿಂಧು ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಕ್ರೀಡೆ, ಕಲೆ, ಸಂಗೀತ ಮತ್ತು ಸಾಮಾಜಿಕ ಸೇವೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ, ಟೀಮ್ವರ್ಕ್, ಶಿಸ್ತು ಮತ್ತು ಸೃಜನಶೀಲತೆ ಹೆಚ್ಚುತ್ತದೆ. ಇವು ಶೈಕ್ಷಣಿಕ ಒತ್ತಡ ಕಡಿಮೆ ಮಾಡಿ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತವೆ. ಜೊತೆಗೆ ಸುಪ್ತ ಪ್ರತಿಭೆಗಳನ್ನು ಹೊರತರುತ್ತವೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಬಿ.ಎಂ.ವಿ ಶಾಲೆಯ ಹಿರಿಯ ವಿದ್ಯಾರ್ಥಿ ನಾಗರಾಜ್ ಅವರು ತನ್ನ ತಂದೆ ರಂಗಭೂಮಿ ಕಲಾವಿದ ಮುನಿಯಪ್ಪ ಅವರ ಸ್ಮರಣಾರ್ಥ ನಿರ್ಮಿಸಿಕೊಟ್ಟ ಬಯಲು ರಂಗಭೂಮಿ ಸ್ಟೀಲ್ ಛಾವಣಿ ಉದ್ಘಾಟಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಬಿ.ಎಂ.ವಿ. ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ವಿ.ಮುನೇಗೌಡ, ಕಾರ್ಯದರ್ಶಿ ಎಲ್.ಕಾಳಪ್ಪ, ಹಂಪಿ ಕನ್ನಡ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಡಾ.ಎ.ಮುರಿಗೆಪ್ಪ, ಸಮಾಜವಾದಿ ಅಧ್ಯಯನ ಕೇಂದ್ರದ ಬಾಪು ಹೆದ್ದೂರ ಶೆಟ್ಟಿ, ಪ್ರೊ.ಹನುಮಂತ, ಜಿ.ವಿ.ಸುಂದರ್, ತೋಟಗಾರಿಕಾ ಇಲಾಖೆಯ ನಿವೃತ್ತ ಹಿರಿಯ ಸಹಾಯಕ ನಿರ್ದೇಶಕ ಸಂತೆ ನಾರಾಯಣಸ್ವಾಮಿ, ಚಿದಾನಂದಮೂರ್ತಿ, ಕ್ಯಾಂಪ್ ತರಬೇತುದಾರ ಬಾಬಾ ಸಾಹೇಬ್ ನಡಾಫ್, ಚಂದನ್ ಮಾತುಂಗೆ, ಸಾಗರ್ ಪಾಟೀಲ್, ಬಿಷ್ಣ ತಾ. ಪಂ. ಮತ್ತು ಗ್ರಾಮ ಪಂಚಾಯಿತಿ ಮುಖಂಡರು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-16-1740998689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.