ಶಿಡ್ಲಘಟ್ಟ: ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು. ಉತ್ತಮ ಸೌಲಭ್ಯಗಳನ್ನು ಒದಗಿಸಲು ಇಲಾಖೆಯು ಸದಾ ಸನ್ನದ್ಧವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ಶನಿವಾರ ತಿಳಿಸಿದರು.

ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಕ್ಕೆ ಭೇಟಿ ನೀಡಿದ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಈಗಾಗಲೇ ಅನೇಕ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ದ್ವಿಭಾಷಾ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಈಗಾಗಲೇ ಜಿಲ್ಲೆಯಾದ್ಯಂತ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತಿದೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಈಗ ಕೇವಲ ಮೂರು ಶಾಲೆಗಳಲ್ಲಿ ಮಾತ್ರ ಬೇಸಿಗೆ ಶಿಬಿರ ನಡೆಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶೀಘ್ರವೇ ಬೇಸಿಗೆ ಶಿಬಿರಗಳನ್ನು ಆರಂಭಿಸಬೇಕು. ಇದೇ ತಿಂಗಳ 22ರಂದು ಜಿಲ್ಲೆಯಾದ್ಯಂತ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಮಾಡಿಕೊಳ್ಳಲು ಶಾಲೆಗಳಿಗೆ ಸೂಚಿಸಲಾಗಿದೆ ಎಂದರು.

ಸುಗಟೂರು ಶಾಲೆಯಲ್ಲಿನ ಭೌತಿಕ ಸೌಲಭ್ಯಗಳನ್ನು ಖುದ್ದು ವೀಕ್ಷಿಸಿ, ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಶೈಕ್ಷಣಿಕ ವರ್ಷಾರಂಭದಿಂದ ಎಲ್ಕೆಜಿ, ಯುಕೆಜಿ ಆರಂಭಿಸಲು ಅನುಮತಿ ಕೊಡಿಸುವುದಾಗಿ ಭರವಸೆ ನೀಡಿದರು. ಶಾಲೆಯಲ್ಲಿ ಉತ್ತಮ ಗುಣಮಟ್ಟದ ಆಕರ್ಷಕ ಜಿರಾಫೆ ಡೆಸ್ಕ್, ಪ್ರಯೋಗಾಲಯ ಕಂಡು ಸಂತಸ ವ್ಯಕ್ತಪಡಿಸಿದರು. ಮುಂದಿನ ಶೈಕ್ಷಣಿಕ ವರ್ಷದಿಂದ ಟಿವಿ, ಇಂಟರಾಕ್ಟೀವ್ ಬೋರ್ಡ್ಗಳ ಮೂಲಕ ಬೋಧಿಸುವ ಶಿಕ್ಷಕರಿಗೆ ಒಂದೇ ರೀತಿಯ ವಿಡಿಯೊ, ವಿಷಯ ಬೋಧನೆಗೆ ಒಂದು ಸಾಮಾನ್ಯ ವೇಳಾಪಟ್ಟಿ ತಯಾರಿಸಲಾಗುವುದು ಎಂದರು.

ಮುಖ್ಯ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿ, ಬೇಸಿಗೆ ಶಿಬಿರದ ವೇಳೆ ಮಕ್ಕಳಲ್ಲಿ ಮೌಲ್ಯಗಳು, ವ್ಯಕ್ತಿತ್ವ ನಿರ್ಮಾಣ, ದೇಶಭಕ್ತಿ, ದೇಶಾಬಿಮಾನ ಮೂಡಿಸಲು ಪೂರಕವಾದ ಅನೇಕ ಚಟುವಟಿಕೆಗಳನ್ನು ರೂಪಿಸಿಕೊಳ್ಳಲಾಗಿದೆ ಎಂದರು.

ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳೊಂದಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್ ಸಂವಾದ ನಡೆಸಿದರು. ಇಂಗ್ಲೀಷ್ನಲ್ಲಿ ಭಾಷಣ, ವೇದ ಗಣಿತದ ಲೆಕ್ಕಗಳನ್ನು ಮಾಡಿಸಿದರು. ಕರ್ನಾಟಕ ಭೂಪಟದಲ್ಲಿ ವಿವಿಧ ಸ್ಥಳಗಳನ್ನು ಗುರುತಿಸಲು ಹೇಳಿದರು. ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಮೌಲ್ಯಶಿಕ್ಷಣದ ಕಿರು ಹೊತ್ತಿಗೆ, ಕರ್ನಾಟಕ ಮ್ಯಾಪ್ ವಿತರಿಸಲಾಯಿತು.

ನಂತರ ಗ್ರಾಮದ ವಿವಿಧೆಡೆ ಯೋಜನೆಗಳನ್ನು ಪರಿಶೀಲಿಸಿದರು. ಜೆ.ವೆಂಕಟಾಪುರ ಮತ್ತು ತೈಬಾನಗರ ಶಾಲೆಗಳಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಗಳಿಗೆ ಬೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎಚ್.ಪ್ರಸನ್ನಕುಮಾರ್, ಬಿಆರ್ಪಿ ವೇಣುಮಾಧವಿ, ಭರತನಾಟ್ಯ ಕಲಾವಿದೆ ಅನನ್ಯ, ಪಿಡಿಒ ಮಮತಾ, ಎಸ್ಡಿಎಂಸಿ ಅಧ್ಯಕ್ಷ ವೆಂಕಟೇಶ್, ಗ್ರಾಮಪಂಚಾಯಿತಿ ಮಾಜಿ ಸದಸ್ಯ ಸತೀಶ್, ಶಿವಶಂಕರಪ್ಪ, ದೇವರಾಜು, ನಾರಾಯಣಸ್ವಾಮಿ, ಅಶೋಕ್, ನಾಗೇಶ್ ಗೌಡ, ಶಿಕ್ಷಕ ಎ.ಬಿ.ನಾಗರಾಜ, ಮಧು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-16-1252212332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.