ಶಿಗ್ಗಾವಿ: ಆಧುನಿಕ ಸಮಾಜವನ್ನು ಎದುರಿಸಲು ಮಕ್ಕಳಿಗೆ ಶಿಕ್ಷಣದ ಜತೆಗೆ ವ್ಯವಹಾರಿಕ ಜ್ಞಾನ ನೀಡುವುದು ಸಹ ಅವಶ್ಯವಾಗಿದೆ. ಅದರಿಂದ ಭವಿಷ್ಯದ ಬದುಕನ್ನು ಸದೃಢಗೊಳಿಸಲು ಸಾಧ್ಯವಿದೆ. ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗಬಾರದು ಎಂದು ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಹೇಳಿದರು.

ತಾಲ್ಲೂಕಿನ ಕೋಣನಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವ ಮತ್ತು ಪಾಲಕರ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಇಒ ಎಂ.ಬಿ.ಅಂಬಿಗೇರ ಮಾತನಾಡಿ, ಪ್ರಸಕ್ತ ವರ್ಷದಲ್ಲಿ 10ನೇ ತರಗತಿ ವಾರ್ಷಿಕ ಪರೀಕ್ಷೆ ಫಲಿತಾಂಶ ಉತ್ತಮವಾಗಿದೆ. ಈ ವರ್ಷವು ಸಹ ಹೆಚ್ಚಿನ ಫಲಿತಾಂಶ ಪಡೆಯಬೇಕು. ಪಾಲಕರು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ ಬಪ್ಪನಕಟ್ಟಿನ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ ಸಾಳೊಂಕೆ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಅರುಣ ಹುಡೇದಗೌಡ್ರ, ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ಎಸ್.ಎಫ್.ಮಣಕಟ್ಟಿ, ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಕ್ಷೇತ್ರ ಸಮನ್ವಯಾಧಿಕಾರಿ ಗೀತಾಂಜಲಿ ತೆಪ್ಪದ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-22-1469990318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.