ಶಿಕಾರಿಪುರ: ‘ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳೂ ವೈಜ್ಞಾನಿಕ ಅರಿವು ಹೊಂದಬೇಕು ಎಂಬುದು ಸರ್ಕಾರದ ಆಶಯ. ಅದಕ್ಕಾಗಿ ಬೇಸಿಗೆ ಶಿಬಿರ ಆಯೋಜಿಸಿದ್ದು, ಮಕ್ಕಳು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಇಮ್ತಿಯಾಜ್ ಹೇಳಿದರು.

ಬೇಗೂರು ಗ್ರಾಮದ ಅರಿವು ಕೇಂದ್ರದಲ್ಲಿ ಸೋಮವಾರ ಆರಂಭಗೊಂಡ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಮಕ್ಕಳಿಗೆ ಗ್ರಾಮದ ಸುತ್ತಲಿನ ಐತಿಹಾಸಿಕ ಪ್ರದೇಶಗಳು, ವೈಜ್ಞಾನಿಕವಾಗಿರುವ ಸರಳ ಪ್ರಯೋಗಗಳು, ಗಣಿತದ ಸರಳ ಸೂತ್ರಗಳ ಅರಿವು, ಗಣಕ ಯಂತ್ರದ ಬಳಕೆ ಹೀಗೆ ಹಲವು ವಿಷಯಗಳ ಕುರಿತು ಶಿಬಿರದಲ್ಲಿ ತರಬೇತಿ ನೀಡಲಾಗುವುದು. ಶಿಬಿರದ ಕೊನೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ ಸೇರಿ ಸುತ್ತಲಿನ ಸರ್ಕಾರಿ ಕಚೇರಿಯ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.

‘ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಿದ್ದು, ಸಂಪನ್ಮೂಲ ವ್ಯಕ್ತಿಗಳೂ ಪಾಲ್ಗೊಳ್ಳಲು ಅವಕಾಶ ಇದೆ. ಈ ಮೂಲಕ ಎಲ್ಲ ನಾಗರಿಕರು ಶಿಬಿರದ ಯಶಸ್ಸಿಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿಜ್ಞಾನ ಪ್ರಯೋಗದ ಮೂಲಕ ಅರಿವು ಮೂಡಿಸುವ ಆಶಯ ಶಿಬಿರದ್ದಾಗಿದ್ದು, 15 ದಿನ ನಡೆಯುವ ಶಿಬಿರದಲ್ಲಿ ಸಂಘ ಸಂಸ್ಥೆಗಳು, ಸಂಪನ್ಮೂಲ ವ್ಯಕ್ತಿಗಳು, ಗ್ರಾಮಸ್ಥರು ಪಾಲ್ಗೊಂಡು ಯಶಸ್ವಿಗೊಳಿಸಬೇಕು’ ಎಂದು ಅರಿವು ಕೇಂದ್ರದ ಮೇಲ್ವಿಚಾರಕ ಎಲ್.ಎಸ್.ರಘುನಾಥ್ ತಿಳಿಸಿದರು.

ಗ್ರಾಮದ ಮುಖಂಡ ಹಳದಪ್ಪ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಈಶ್ವರಪ್ಪ, ಕಂದಾಯ ವಸೂಲಿಗಾರ ಪರಶುರಾಮ್, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-42-546107884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.