ಶನಿವಾರಸಂತೆ:‘ಶಿಕ್ಷಣ ಎಂದರೆ ಕೇವಲ ಓದುವುದು ಮತ್ತು ಅಂಕಗಳನ್ನು ಗಳಿಸುವುದು ಮಾತ್ರವಲ್ಲ. ವಿದ್ಯಾರ್ಥಿಗಳಲ್ಲಿ ಉತ್ತಮ ನಾಗರಿಕ ಗುಣಗಳು, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವುದು ಶಿಕ್ಷಣದ ಪ್ರಮುಖ ಉದ್ದೇಶ’ ಎಂದು ಕೊಡಗು ಜಿಲ್ಲಾ ಉಪ ವಿಭಾಗಾಧಿಕಾರಿ ನಿತಿನ್ ಚೆಕ್ಕಿ ಹೇಳಿದರು.

ಕೊಡ್ಲಿಪೇಟೆ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ 2025–26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಮಾರ್ಗದರ್ಶಕರಾಗಿ ಬೆಳೆಯಬೇಕು. ಶಿಕ್ಷಣದ ಜೊತೆಗೆ ಕ್ರೀಡೆ, ಆರೋಗ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು. ಉತ್ತಮ ಆರೋಗ್ಯ ಮತ್ತು ಕ್ರೀಡಾ ಮನೋಭಾವವು ವ್ಯಕ್ತಿಯ ಸರ್ವಾಂಗೀಣ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ’ ಎಂದು ಹೇಳಿದರು.

ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಶಿಕ್ಷಣವು ವ್ಯಕ್ತಿಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಮೂಲ ಆಧಾರ ಎಂದರು. ಮನೆಹಳ್ಳಿ ಮಠದ ಮಹಾಂತ ಸ್ವಾಮೀಜಿ ಮಾತನಾಡಿ, ಶಿಕ್ಷಣದ ಜೊತೆಗೆ ಶಿಸ್ತು, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಕಲಾವಿದ ಧ್ರುವಂತ್ ಬಾಲಾಜಿ ಮಾತನಾಡಿ, ‘ಜೀವನದಲ್ಲಿ ಯಶಸ್ಸು ಸಾಧಿಸಲು ಪರಿಶ್ರಮ, ಆತ್ಮವಿಶ್ವಾಸ ಹಾಗೂ ನಿರಂತರ ಪ್ರಯತ್ನ ಅಗತ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಗುರಿಯತ್ತ ಮುನ್ನಡೆಯಬೇಕು’ ಎಂದರು.

ಸೋಮವಾರಪೇಟೆ ತಾಲ್ಲೂಕು ದಂಡಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ, ‘ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಕೀಲ ಜಗದೀಶ್ ಮಾತನಾಡಿ, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಪಿಯು ಕಾಲೇಜಿಗೆ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಭರಿಸುವ ಭರವಸೆ ನೀಡಿದರು.

ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್. ಎನ್. ಚಂದ್ರಮೌಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕರಾಗಿ 32 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಮುಖ್ಯಶಿಕ್ಷಕರಾಗಿ ನಿವೃತ್ತಿ ಹೊಂದಿದ ಎಂ.ಎಸ್. ಅಬ್ದುಲ್ ರಬ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅರ್ಥಶಾಸ್ತ್ರ ಉಪನ್ಯಾಸಕಿ ರಮ್ಯಾ ವಾರ್ಷಿಕ ವರದಿ ವಾಚಿಸಿದರು.

ಕೊಡ್ಲಿಪೇಟೆ ವಿದ್ಯಾಸಂಘದ ಉಪಾಧ್ಯಕ್ಷ ಜಿ. ಪಿ. ಶಂಭುಲಿಂಗಪ್ಪ, ಕಾರ್ಯದರ್ಶಿ ಕೆ. ಎನ್. ಪರಮೇಶ್, ಖಜಾಂಚಿ ಉದಯಕುಮಾರ್, ನಿರ್ದೇಶಕರಾದ ಶಿವಪ್ರಸಾದ್, ಜಿ.ಪಿ.ಶಿವಕುಮಾರ್, ಬಿ.ಕೆ. ಯತೀಶ್, ಅರುಣಾಚಂದ್ರಮೌಳಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿರಂಜನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ಪಾಲ್ಗೊಂಡಿದ್ದರು.

ಉಪನ್ಯಾಸಕ ಕೆ.ಎಚ್. ಯೋಗೇಂದ್ರ ನಿರೂಪಿಸಿದರು. ಕೆ.ಕೆ.ಅಭಿಲಾಷ್ ಸ್ವಾಗತಿಸಿದರು. ರೇಣುಕಾ ತನಿಪ್ ವಂದಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-545147314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.