ಶಿರಾ: ನಗರದ ಸಪ್ತಗಿರಿ ಬಡಾವಣೆಯಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮನೆಮನೆಗೆ ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಪೋಷಕರ ಮನವೊಲಿಸಿದರು.

‘ನಿಮ್ಮ ಆಯ್ಕೆ ಸರ್ಕಾರಿ ಶಾಲೆಗಳೇ ಆಗಿರಲಿ’ ಎಂಬ ಘೋಷಣೆಯೊಂದಿಗೆ ವಿಶೇಷ ಜನಜಾಗೃತಿ ಆಂದೋಲನ ನಡೆಸಿದರು.

ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಹಾಗೂ ಸ್ವಂತ ಬಂಡವಾಳದಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಹೈ–ಟೆಕ್ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆ ನಿರ್ಮಿಸಿದ್ದು, ಎಲ್ಲಾ ರೀತಿಯ ಸೌಕರ್ಯಗಳೊಂದಿಗೆ ಇಲ್ಲಿ ಉಚಿತ ಹಾಗೂ ಅತ್ಯುನ್ನತ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಭಾಸ್ಕರ್, ಗೌಡಪ್ಪ, ತೇಜಸ್ವರ್, ಭೂತರಾಜು, ರಂಗನಾಥ್, ಡಿ.ಎಚ್.ಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-17-1188331288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.