ಶಿರಾ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಸಂಸ್ಕಾರ ಮತ್ತು ಸಮನ್ವಯತೆ ರೂಢಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಶರಣ ಸಾಹಿತ್ಯ ಮತ್ತು ಸಂತ ಶಿಶುನಾಳ ಶರೀಫರ ತತ್ವ ಪ್ರಚಾರಕ ಎಂ.ಸಿ. ನರಸಿಂಹಮೂರ್ತಿ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025- 26ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಯುವಜನತೆ ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಅತ್ಯುತ್ತಮ ಆಕರ ಗ್ರಂಥಗಳನ್ನು ಓದುವುದರ ಮೂಲಕ ಅದರಲ್ಲಿ ಇರುವ ಸಾರಾಂಶಗಳನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಪ್ರೊ.ಡಿ.ಚಂದ್ರಶೇಖರಪ್ಪ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಒತ್ತು ನೀಡಬೇಕು ಎಂದರು.

ಸಾಂಸ್ಕೃತಿಕ ಸಮಿತಿ ಸಂಚಾಲಕ ಹೊನ್ನಾಂಜಿನಯ್ಯ ಡಿ.ಆರ್. ಅವರು 2025- 26ನೇ ಶೈಕ್ಷಣಿಕ ಸಾಲಿನಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿದರು.

ಪ್ರಾಧ್ಯಾಪಕ ಬಾಳಪ್ಪ ಎ.ಬಿ., ಪ್ರಭಾಸ್ ಪಂಡಿತ್, ಹನುಮಂತರಾಜು, ಪತ್ರಾಂಕಿತ ವ್ಯವಸ್ಥಾಪಕ ಕೆ.ವಿ.ಶ್ರೀನಿವಾಸ್ ಮೂರ್ತಿ, ಲಿಂಗರಾಜು, ತಿಪ್ಪೇಸ್ವಾಮಿ, ವೆಂಕಟನಾರಾಯಣ್ ಎಸ್., ಲೆಫ್ಟಿನೆಂಟ್ ಶ್ರೀಕೃಷ್ಣ ವಿ.ವೈ., ಸತೀಶ್ ಕುಮಾರ್, ಮಮತಾ, ಕಾವ್ಯಶ್ರೀ, ಹರೀಶ್, ಕುಮಾರ್, ವೀಣಾ, ಸುಕನ್ಯಾ ಟಿ.ಎಲ್., ಪ್ರತಿಭಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-626398704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.