ಶಿರಸಿ: ‘ಇಂದಿನ ಆಧುನಿಕ ಜೀವನಶೈಲಿಯಲ್ಲಿ ಮನುಷ್ಯ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಪುರಾತನ ಆಯುರ್ವೇದ ಚಿಕಿತ್ಸಾ ಪದ್ಧತಿಯು ರೋಗ ಮುಕ್ತ ಮತ್ತು ಸದೃಢ ಸಮಾಜದ ನಿರ್ಮಾಣಕ್ಕೆ ಅತ್ಯಂತ ಪೂರಕವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಕೆ.ಎಚ್.ಬಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೃದ್ಧಿ ಮಹಿಳಾ ಮಂಡಳ ಹಾಗೂ ವಿವಿಧ ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

'ಅನಾರೋಗ್ಯಕ್ಕೆ ತುತ್ತಾದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ಆ ನಿಟ್ಟಿನಲ್ಲಿ ಆಯುರ್ವೇದವು ಜೀವನ ಕ್ರಮದ ಬಗ್ಗೆ ನಮಗೆ ತಿಳಿಸಿಕೊಡುತ್ತದೆ. ಸಂಘ ಸಂಸ್ಥೆಗಳು ಇಂತಹ ಜನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವೈದ್ಯಕೀಯ ಸೌಲಭ್ಯ ತಲುಪಿಸುವಂತಾಗಬೇಕು. ಇಂತಹ ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ ಎಂದರು.

ಪ್ರಮುಖರಾದ ಎಸ್.ಕೆ. ಭಾಗವತ, ಸರಸ್ವತಿ ಎನ್. ರವಿ, ಎಸ್.ಎನ್.ಹೆಗಡೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಮೃದ್ಧಿ ಮಹಿಳಾ ಮಂಡಳದ ಪದಾಧಿಕಾರಿಗಳು ಹಾಗೂ ಪಂಚವಟಿ ಚಾರಿಟೇಬಲ್ ಟ್ರಸ್ಟ್ನ ಸದಸ್ಯರು, ಸ್ಥಳೀಯರು ಭಾಗವಹಿಸಿ ಶಿಬಿರದ ನಿರ್ವಹಣೆಯಲ್ಲಿ ಸಹಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-20-824681547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.