ಶಿರಸಿ: ‘ಸೋಲದೆ ಗೆದ್ದರೆ ಅದು ಕೇವಲ ಮಂದಹಾಸ, ಆದರೆ ಸೋತು ಗೆದ್ದರೆ ಅದು ಇತಿಹಾಸ’ ಎಂದು ಮನುವಿಕಾಸ ಸಂಸ್ಥೆಯ ಅಧ್ಯಕ್ಷ ಗಣಪತಿ ಭಟ್ ಹೇಳಿದರು.

ಇತ್ತೀಚೆಗೆ ಇಲ್ಲಿನ ಪಿ.ಜಿ.ಎಸ್.ಎಸ್. ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸುಲಭದ ಜೀವನ ಬಯಸುವುದನ್ನು ಬಿಟ್ಟು ಹೋರಾಟದ ಮನೋಭಾವ ಬೆಳೆಸಿಕೊಂಡರೆ ಜೀವನ ಉತ್ಸಾಹದಿಂದ ಕೂಡಿರುತ್ತದೆ’ ಎಂದು ಕಿವಿಮಾತು ಹೇಳಿದರು.

ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದರು. ಡಿವೈಎಸ್ಪಿ ಗೀತಾ ಪಾಟೀಲ, ಧನುಷ್ಕುಮಾರ್ ಶೆಟ್ಟಿ, ಪ್ರಾಚಾರ್ಯ ರಾಜು ಎನ್. ಕದಂ ಮಾತನಾಡಿದರು. ಈ ವೇಳೆ ಸುದೀರ್ಘ ಸೇವೆ ಸಲ್ಲಿಸಿದ ಅಶ್ವಿನಿ ಬಿ.ಎಚ್. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ರಾಷ್ಟ್ರೀಯ ಸುರಕ್ಷತಾ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ, ಕುಶಲಕರ್ಮಿಗಳಿಗೆ ಉಚಿತ ಹೆಲ್ಮೆಟ್ ವಿತರಿಸಲಾಯಿತು. ಶಿಕ್ಷಕರಾದ ಝೇಬಾ ಚಂದಾವರ ಸ್ವಾಗತಿಸಿದರು. ವಿ.ಎಸ್. ಪವಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-20-830441543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.