ಶಿರಸಿ: ಸ್ವರ್ಣವಲ್ಲೀ ಮಹಾಸಂಸ್ಥಾನದ ಕೃಷಿ ಜಯಂತಿಯ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಕೃಷಿ ಕುರಿತು ಆಸಕ್ತಿ ಮತ್ತು ಜ್ಞಾನ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ 14ನೇ ವರ್ಷದ ರಾಜ್ಯ ಮಟ್ಟದ ಕೃಷಿ ರಸಪ್ರಶ್ನೆ ಕಾರ್ಯಕ್ರಮಕ್ಕೆ ಏ.21ರಂದು ಅಧಿಕೃತ ಚಾಲನೆ ಸಿಗಲಿದೆ.

ಈ ಕುರಿತು ಪ್ರಕಟಣೆ ನೀಡಿರುವ ಸಂಚಾಲಕ ರತ್ನಾಕರ ಬಾಡಲಕೊಪ್ಪ, ‘ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಏ.21ರ ಬೆಳಿಗ್ಗೆ 11 ಗಂಟೆಗೆ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ, (https://quizzory.in/id/69dd98f2471fe0baaffba629) ಲಿಂಗ್ ಲಭ್ಯವಿದ್ದು, ವಿದ್ಯಾರ್ಥಿಗಳು ಒಂದು ಬಾರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ರಾಜ್ಯದ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯು ಮುಕ್ತವಾಗಿದೆ. ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಸರಿಯಾದ ಉತ್ತರ ನೀಡಿದ 10 ವಿದ್ಯಾರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುವುದು. ಐದು ಗುಂಪುಗಳನ್ನಾಗಿಸಿ, ಏ.29ರಂದು ಸ್ವರ್ಣವಲ್ಲೀ ಮಠದ ಮುಖ್ಯ ವೇದಿಕೆಯಲ್ಲಿ ನಡೆಯುವ ನೇರ ಸುತ್ತಿನ ಮೌಖಿಕ ಸ್ಪರ್ಧೆಗೆ ಆಹ್ವಾನಿಸಲಾಗುತ್ತದೆ. ಅಂತಿಮ ವಿಜೇತರಿಗೆ ಕ್ರಮವಾಗಿ ₹5 ಸಾವಿರ, ₹3 ಸಾವಿರ ಹಾಗೂ ₹2 ಸಾವಿರ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ಹಾಗೂ ಪ್ರವಾಸ ಭತ್ಯೆ ನೀಡಿ ಗೌರವಿಸಲಾಗುವುದು. ಮಧ್ಯಾಹ್ನ 4 ಗಂಟೆಗೆ ಪ್ರಶಸ್ತಿ ವಿತರಣೆ ಜರುಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-20-1434625531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.