ಶಿರ್ವ: ವಿದ್ಯಾಭಾರತಿ ಜೊತೆ ಸಂಯೋಜನೆಗೊಂಡಿರುವ ಶಾಲೆಗಳ ವಿದ್ಯಾರ್ಥಿಗಳಿಗೆ ಹಲವಾರು ಪ್ರಯೋಜನಗಳಿವೆ. ಆದ್ದರಿಂದ ಹೆಚ್ಚು ಶಾಲೆಗಳನ್ನು ವಿದ್ಯಾಭಾರತಿಯಲ್ಲಿ ಸಂಯೋಜನೆಗೊಳಿಸಲು ಗಮನ ಹರಿಸಲಾಗುವುದು ಎಂದು ವಿದ್ಯಾಭಾರತಿ ಕರ್ನಾಟಕದ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ ಹೇಳಿದರು.

ವಿದ್ಯಾಭಾರತಿ ಸಂಸ್ಥೆಗಳ 10ನೇ ತರಗತಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ‘ಅಂಗಳ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಡುಕುತ್ಯಾರು ಆನೆಗುಂದಿ ಮಠ ಮಹಾಸಂಸ್ಥಾನ ಸರಸ್ವತಿ ಪೀಠದಲ್ಲಿ ಕಾರ್ಯಕ್ರಮ ನಡೆಯಿತು.

ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ 10ನೇ ತರಗತಿ ವಿದ್ಯಾರ್ಥಿ, 625ಕ್ಕೆ 575 ಅಂಕ ಗಳಿಸಿದ ಬೋಧಾಯನ ಶರ್ಮ ಬಳ್ಳಾರಿ ಅವರನ್ನು ಸನ್ಮಾನಿಸಲಾಯಿತು. ಆನೆಗುಂದಿ ಮಠದ ದಿವಾನ ಲೋಲಾಕ್ಷ ಶರ್ಮ, ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಟ್ರಸ್ಟ್ ಕಾರ್ಯದರ್ಶಿ ಗುರುರಾಜ್ ಆಚಾರ್ಯ, ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿಯ ಮುಖ್ಯೋಪಾಧ್ಯಾಯಿನಿ ಅನಿತಾ, ಉಪಮುಖ್ಯೋಪಾಧ್ಯಾಯಿನಿ ಸೌಮ್ಯಾ, ವಿದ್ಯಾರ್ಥಿಯ ತಂದೆ ಭಾಸ್ಕರ್ ಶರ್ಮ ಬಳ್ಳಾರಿ, ತಾಯಿ ಶಕುಂತಲಾ ಭಾಸ್ಕರ್ ಶರ್ಮ ಬಳ್ಳಾರಿ ಇದ್ದರು.

ಗುರುರಾಜ್ ಆಚಾರ್ಯ ಕೆ.ಜೆ ಸ್ವಾಗತಿಸಿದರು. ಮಹೇಶ ಹೈಕಾಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-1056446995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.