ಶಿರ್ವ: ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ 2003–04ನೇ ಶೈಕ್ಷಣಿಕ ವರ್ಷದ ಬಿ.ಕಾಂ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ. ಭಾಸ್ಕರ್ ಶೆಟ್ಟಿ ಮಾತನಾಡಿ, ತಾವು ಕಲಿತ ಸಂಸ್ಥೆಯ ಬಗ್ಗೆ ಗೌರವಾದರ ಇಟ್ಟುಕೊಂಡು ಸಹಾಯ ಮಾಡುವುದು ಕ್ರಿಯಾಶೀಲ ವಿದ್ಯಾರ್ಥಿಗಳ ಹೆಗ್ಗುರುತು. ಈ ದಿಶೆಯಲ್ಲಿ ಸಂಸ್ಥೆ ವಿದ್ಯಾರ್ಥಿಗಳ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಬದಲಾದ ಕಾಲಮಾನದಲ್ಲಿ ಹಳೆವಿದ್ಯಾರ್ಥಿಗಳು ಸಂಸ್ಥೆಗೆ ಬಂದು ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ 2003–04ನೇ ಸಾಲಿನ ಉಪನ್ಯಾಸಕರು, ಕಚೇರಿ ಸಿಬ್ಬದಿ ಭಾಗವಹಿಸಿ ಅನಿಸಿಕೆಗಳನ್ನು ಹಂಚಿಕೊಂಡರು. ಹಳೆ ವಿದ್ಯಾರ್ಥಿಗಳು ಕಾಲೇಜಿನ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ₹1.50 ಲಕ್ಷ ದೇಣಿಗೆ ನೀಡಿದರು. ನಿವೃತ್ತ, ಪ್ರಸ್ತುತ ಇರುವ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸೋನಾ ಎಚ್.ಸಿ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-1257561014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.