ಶಿರ್ವ: ‘ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯೊಂದು ನೂರು ವರ್ಷ ನಿರಂತರವಾಗಿ ಜ್ಞಾನದೀವಿಗೆ ಬೆಳಗಿಸುವುದು ಸಾಮಾನ್ಯ ಸಾಧನೆಯಲ್ಲ. ಈ ಶಾಲೆಯು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಸಮಾಜದ ವಿವಿಧ ಸ್ತರಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು, ಶಾಲೆಯ ಹೆಸರು ಉಳಿಸಿದ್ದಾರೆ’ ಎಂದು ಪುರೋಹಿತ ಎನ್.ಆರ್. ದಾಮೋದರ ಶರ್ಮಾ ಬಾರ್ಕೂರು ಹೇಳಿದರು.

ಬಂಟಕಲ್ಲು ದುರ್ಗಾಪರಮೆಶ್ವರಿ ದೇವಳದ ಆಡಳಿತಕ್ಕೆ ಒಳಪಟ್ಟ ದುರ್ಗಾಪರಮೇಶ್ವರಿ ಶಾಲಾ ಶತಸಂಭ್ರಮದ ಸಮಾರೋಪ ಸಮಾರಂಭದಲ್ಲಿ ವಿದ್ಯಾನಿಧಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪಾಂಬೂರು ಚರ್ಚ್ ಪ್ರಧಾನ ಧರ್ಮಗುರು ರೋಶನ್ ಡಿಸೋಜ ಮಾತನಾಡಿ, ‘ಶಿಕ್ಷಣ ಪಡೆಯುವುದು ನಮ್ಮ ಜೀವನ, ಕುಟುಂಬ, ದೇಶವನ್ನು ಕಟ್ಟಲು ಎಂಬುದನ್ನು ಮರೆಯಬಾರದು. ಭ್ರಷ್ಟಾಚಾರ ಮುಕ್ತ ಸಮಾಜ ಕಟ್ಟುವುದು ಜವಾಬ್ದಾರಿ’ ಎಂದರು.

ಶಾಲೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಲಾಯಿತು. ಶಿಕ್ಷಕಿಯರು, ಅಡುಗೆ ಸಿಬ್ಬಂದಿ, ಸಹಾಯಕಿ, ಅಂಗನವಾಡಿ ಶಿಕ್ಷಕಿ, ದಾನಿಗಳನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ನಿವೃತ್ತ ಮುಖ್ಯಶಿಕ್ಷಕ ಎನ್. ರಾಧಾಕೃಷ್ಣ ಪ್ರಭು, ಶಿಕ್ಷಕಿ ಸಂಗೀತಾ ಆರ್. ಪಾಟ್ಕರ್ ಮಾತನಾಡಿದರು. ಖಜಾಂಚಿ ವಿಶ್ವನಾಥ್ ಬಾಂದೇಲ್ಕರ್ ದಾನಿಗಳನ್ನು ಪರಿಚಯಿಸಿದರು.

ಸ್ಮರಣ ಸಂಚಿಕೆ ‘ವಿದ್ಯಾ ಶತಕ’ವನ್ನು ಹಳೆವಿದ್ಯಾರ್ಥಿ ಶಂಕರ ಶೆಟ್ಟಿ ಮಾನಿಪಾಡಿ ಬಿಡುಗಡೆಗೊಳಿಸಿದರು. ಸಂಪಾದಕ ಮಂಡಳಿ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ, ಪ್ರಧಾನ ಸಂಪಾದಕ ನಿವೃತ್ತ ಶಿಕ್ಷಕ ಬಿ. ಪುಂಡಲೀಕ ಮರಾಠೆ ಸಹಕರಿಸಿದರು. ಶಾಲಾ ಆಡಳಿತ ಮಂಡಳಿ, ದೇವಳದ ವತಿಯಿಂದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಾಧವ ಕಾಮತ್, ಪ್ರಧಾನ ಕಾರ್ಯದರ್ಶಿ ಕೆ.ಆರ್. ಪಾಟ್ಕರ್ ಅವರನ್ನು ಕ್ಷೇತ್ರದ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಸನ್ಮಾನಿಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶಶಿಧರ ವಾಗ್ಲೆ, ಸಂಚಾಲಕ ರಾಮದಾಸ್ ಪ್ರಭು, ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ ಭಾಗವಹಿಸಿದ್ದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಾಧವ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕೆ.ಆರ್. ಪಾಟ್ಕರ್ ಸ್ವಾಗತಿಸಿದರು. ದಿನೇಶ್ ದೇವಾಡಿಗ ವರದಿ ಓದಿದರು. ದೇವದಾಸ್ ಪಾಟ್ಕರ್, ಅರುಂಧತಿ ಪ್ರಭು ನಿರೂಪಿಸಿದರು. ಖಜಾಂಚಿ ವಿಶ್ವನಾಥ ಬಾಂದೆಲ್ಕರ್ ವಂದಿಸಿದರು. ಅದಾನಿ ಸಮೂಹದ ಅಧ್ಯಕ್ಷ, ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಭೇಟಿ ನೀಡಿ ಶುಭಹಾರೈಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-721450569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.