ಶಿವಮೊಗ್ಗ: ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳ ಪ್ರವೇಶಕ್ಕಾಗಿ ನಡೆಯುವ ಪ್ರಾಯೋಗಿಕ ಪರೀಕ್ಷೆ ಮೇ 10ರಂದು ನಡೆಯಲಿದೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಕೆ.ಇ.ಎ ನೇತೃತ್ವದಲ್ಲಿ ನಡೆಯುವ ಈ ಪರೀಕ್ಷೆಯು ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವಿಜ್ಞಾನ ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಅನ್ವಯವಾಗಲಿದೆ.

ದಾಖಲೆ ಅಪ್ಲೋಡ್ ಮಾಡಲು ಮೇ 4 ಕೊನೆಯ ದಿನ. ಮೇ 5ರ ಸಂಜೆ 4ರವರೆಗೆ ದಾಖಲೆಗಳ ಪರಿಶೀಲನೆ ಆಯಾ ಕೇಂದ್ರಗಳಲ್ಲಿ ನಡೆಯಲಿದೆ. ಫಲಿತಾಂಶ ಮೇ 7ರಂದು ಕೆ.ಇ.ಎ ಅಧಿಕೃತ ಜಾಲತಾಣದಲ್ಲಿ ಪ್ರಕಟವಾಗಲಿದೆ.

ಮೇ 8ರಿಂದ 10ರ ಬೆಳಿಗ್ಗೆ 7 ಗಂಟೆವರೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರಾಯೋಗಿಕ ಪರೀಕ್ಷೆ ಮೇ 10ರಂದು ಬೆಳಿಗ್ಗೆ 9ರಿಂದ ಆರಂಭವಾಗಲಿದೆ.

ಅಭ್ಯರ್ಥಿಗಳು ಮೇ 10ರಂದು ಬೆಳಿಗ್ಗೆ 8ಕ್ಕೆ ತಮಗೆ ನಿಗದಿಯಾದ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ತಡವಾಗಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಮತ್ತು ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯ ಸೇರಿದಂತೆ ರಾಜ್ಯದ ಒಟ್ಟು 17 ಕೇಂದ್ರಗಳಲ್ಲಿ ಏಕಕಾಲಕ್ಕೆ ಪರೀಕ್ಷೆ ನಡೆಯಲಿದೆ.

ಮೇ 14ರಂದು ಬೆಳಿಗ್ಗೆ 11 ಗಂಟೆಯೊಳಗೆ ಫಲಿತಾಂಶ ಪ್ರಕಟವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣ ಅಥವಾ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-1841716986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.