ಶಿವಮೊಗ್ಗ: ‘ಸಮಕಾಲೀನ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯು ಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಹೊಸ ಸಂಚಲನವನ್ನು ಉಂಟು ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಇದರ ಪ್ರಯೋಜನಗಳನ್ನು ಬಳಸಿಕೊಳ್ಳುವಾಗ ಸವಾಲುಗಳನ್ನೂ ಸಮರ್ಪಕವಾಗಿ ಎದುರಿಸಬೇಕಿದೆ’ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ಹೇಳಿದರು.

ಅವರು ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಮಲ್ಲಿಗೆನಹಳ್ಳಿಯ ಜ್ಞಾನಪಥ ಆವರಣದಲ್ಲಿ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆ, ಅಂತರಶಿಸ್ತೀಯತೆ ಮತ್ತು ಉನ್ನತ ಶಿಕ್ಷಣದ ಭವಿಷ್ಯ’ ವಿಷಯದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

‘ಹವಾಮಾನ ಬದಲಾವಣೆ ಇಂದು ಅಂತರಶಿಸ್ತೀಯ ಅಧ್ಯಯನದ ಪ್ರಮುಖ ವಿಷಯವಾಗಿದ್ದು, ಇದು ವಿವಿಧ ಕ್ಷೇತ್ರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.

ಐಐಎಂ ಬೆಂಗಳೂರು ಸಂಸ್ಥೆಯ ಪ್ರೊ.ದೀಪ್ತಿ ಗಣಪತಿ ದಿಕ್ಸೂಚಿ ಭಾಷಣ ಮಾಡಿ, ‘ಕೃತಕ ಬುದ್ಧಿಮತ್ತೆ ಮತ್ತು ಮುಂಚೂಣಿಯ ತಂತ್ರಜ್ಞಾನಗಳು ಹವಾಮಾನ ಬದಲಾವಣೆ, ಆರೋಗ್ಯ ಮುಂತಾದ ಜಾಗತಿಕ ಸವಾಲುಗಳನ್ನು ಎದುರಿಸಲು ಹೇಗೆ ನೆರವಾಗುತ್ತವೆ ಎಂಬುದನ್ನು ವಿವರಿಸಿದರು. ಜೊತೆಗೆ ಒಳಗೊಳ್ಳುವಿಕೆ ಮತ್ತು ದತ್ತಾಂಶದ ಸಾರ್ವಭೌಮತ್ವವನ್ನು ಕಾಪಾಡುವ ಅಗತ್ಯತೆ ಇದೆ’ ಎಂದು ಒತ್ತಿ ಹೇಳಿದರು.

ಗೋಷ್ಠಿಗಳಲ್ಲಿ ವಿವಿಧ ತಜ್ಞರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ವೈದ್ಯರಾದ ಶ್ರೀಕಾಂತ್ ಹೆಗಡೆ ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವವನ್ನು ವಿವರಿಸಿ, ಸಂಕೀರ್ಣ ರೋಗಗಳ ಸಂಶೋಧನೆಗೆ ಇದು ಸಹಾಯಕವಾಗುತ್ತದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂಧ್ಯಾ ಕಾವೇರಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶರತ್ ಅನಂತಮೂರ್ತಿ ಮತ್ತು ದೀಪ್ತಿ ಗಣಪತಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಯೋಜಕರಾದ ಅರ್ಚನಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-42-1074904073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.