ಶಿವಮೊಗ್ಗ: ‘ಈ ಬಾರಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುತ್ತಿದೆ. ಒಟ್ಟು 52 ಸಾವಿರ ‘ಅತಿಥಿ’ಗಳನ್ನು ನೇಮಕ ಮಾಡಿಕೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಲು ಶುಕ್ರವಾರ ಇಲ್ಲಿನ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ್ದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಶಿವಮೊಗ್ಗದಲ್ಲಿ 19 ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಠ ₹3.5 ಕೋಟಿ ವ್ಯಯಿಸಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪರಿಕಲ್ಪನೆ ಈಗ ದೇಶದಲ್ಲಿಯೇ ಮಾದರಿ ಆಗಿದ್ದು, ಇದೇ ಮಾದರಿ ಅಳವಡಿಸಿಕೊಂಡು ತೆಲಂಗಾಣ ಸರ್ಕಾರ ಟಿಪಿಎಸ್ ಆರಂಭಿಸಲು ಮುಂದಾಗಿದೆ. ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದರು.

‘ಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಇದ್ದ ಬಹಳಷ್ಟು ನ್ಯೂನತೆಗಳನ್ನು ಈಗ ಸರಿಪಡಿಸಲಾಗಿದೆ. ಶಿಕ್ಷಣದ ಗುಣಮಟ್ಟವೂ ಹೆಚ್ಚಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವವರ ಸಂಖ್ಯೆ ಶೇ 6.4ರಷ್ಟು ಹೆಚ್ಚಳಗೊಂಡಿರುವುದೇ ಅದಕ್ಕೆ ಸಾಕ್ಷಿ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-104156355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.