ಶಿವಮೊಗ್ಗ: ‘ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಮೇ 17ರಂದು ವಾರ್ಷಿಕ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಎಚ್.ಯು.ವೈದ್ಯನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಅಂದು ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಜಿ.ಪಂ ಸಿಇಒ ಎನ್.ಹೇಮಂತ್ ಉದ್ಘಾಟಿಸಲಿದ್ದಾರೆ’ ಎಂದರು.

‘ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆರ್.ಪಿ.ಭರತ್ರಾಜ್ ಸಿಂಗ್, ಡಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ ಪುರಸ್ಕೃತರಾದ ಶರತ್ಕುಮಾರ್, ಅಭಿಮಾನಿ ಪ್ರಕಾಶನ ಪ್ರಶಸ್ತಿ ಪುರಸ್ಕೃತರಾದ ಮಹೇಶ್ ಹೆಗಡೆ, ಗಣೇಶ ಜಿ.ದತ್ತಿ ಪ್ರಶಸ್ತಿ ಪುರಸ್ಕೃತರಾದ ಅರುಣ್ ಮಾಸಡಿ ಇವರನ್ನು ಗೌರವಿಸಲಾಗುವುದು’ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ಉಪಾಧ್ಯಕ್ಷರಾದ ಕೆ.ಎಸ್.ಹುಚ್ರಾಯಪ್ಪ, ಟಿ.ಸತ್ಯನಾರಾಯಣ, ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಖಜಾಂಚಿ ಎಸ್.ಆರ್.ರೋಹಿತ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ವಿ.ಶೆಟ್ಟಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-42-887809057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.