ಶಿವಮೊಗ್ಗ: ‘ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವ ಮೇ 6ರಂದು ಬೆಳಿಗ್ಗೆ 10.30ಕ್ಕೆ ಶಂಕರಘಟ್ಟದ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ’ ಎಂದು ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಶ್ವವಿದ್ಯಾಲಯದ ಕುಲಾಧಿಪತಿ ಯೂ ಆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದು, ನ್ಯಾಕ್ ಮತ್ತು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಂ ಅಧ್ಯಕ್ಷ ಪ್ರೊ.ಅನಿಲ್ ಡಿ. ಸಹಸ್ರಬುದ್ಧೆ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು’ ಎಂದರು.

‘ಈ ಬಾರಿ ಘಟಿಕೋತ್ಸವದಲ್ಲಿ ಕಲಾ ವಿಭಾಗದಲ್ಲಿ 62, ವಾಣಿಜ್ಯದಲ್ಲಿ 6, ಶಿಕ್ಷಣ ವಿಭಾಗದಲ್ಲಿ 9, ಕಾನೂನು ವಿಭಾಗದಲ್ಲಿ 1, ವಿಜ್ಞಾನ ವಿಷಯದಲ್ಲಿ 84 ಪಿಎಚ್.ಡಿ ಇದ್ದು, 106 ಪುರುಷರು ಹಾಗೂ 57 ಮಹಿಳೆಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುವುದು’ ಎಂದು ಹೇಳಿದರು.

‘7,015 ಪುರುಷರು ಹಾಗೂ 9,940 ಮಹಿಳೆಯರು ಸೇರಿ ಒಟ್ಟು 16,955 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. 155 ಚಿನ್ನದ ಪದಕ ಪ್ರದಾನ ಮಾಡಲಾಗುತ್ತಿದ್ದು, ಇದನ್ನು 11 ಪುರುಷರು ಮತ್ತು 68 ಮಹಿಳೆಯರು ಹಂಚಿಕೊಂಡಿದ್ದಾರೆ. 21 ನಗದು ಬಹುಮಾನಗಳಿದ್ದು, ಐವರು ಪುರುಷರು ಹಾಗೂ 24 ಮಹಿಳೆಯರು ಹಂಚಿಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಜ್ಞಾನ ಸಹ್ಯಾದ್ರಿಯ ಎಚ್.ಎಂ.ಅಭಿಷೇಕ್ ಅವರು ಎಂ.ಎ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂದರೆ 10 ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನಗಳನ್ನು ಪಡೆದರೆ, ಎಂಎಸ್ಸಿ ಪರಿಸರ ವಿಜ್ಞಾನದಲ್ಲಿ ರಕ್ಷಾ ಏಳು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಆರ್.ಸೃಷ್ಟಿ ಎಂ.ಎಸ್ಸಿ ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಆರು ಚಿನ್ನದ ಪದಕಗಳನ್ನು ಪಡೆದಿದ್ದು, ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಸಹನಾ ಗಣೇಶ್ ಶೇಟ್ ಎಂ.ಬಿ.ಎ.ನಲ್ಲಿ ಐದು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ ಪಡೆದಿದ್ದಾರೆ’ ಎಂದು ವಿವರಿಸಿದರು.

‘ಎಂ.ಎ ಸಮಾಜಶಾಸ್ತ್ರ ವಿಷಯದಲ್ಲಿ ಎಸ್.ಸಜನಾ ಐದು, ಎಲ್. ಅಭಿಲಾಷ್ ಎಂ.ಎಸ್ಸಿ ಗಣಿತ ವಿಷಯದಲ್ಲಿ 4 ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಪಡೆದಿದ್ದಾರೆ. ಇತಿಹಾಸ ಮತ್ತು ಪ್ರಾಕ್ತಾನ ವಿಜ್ಞಾನ, ಔದ್ಯೋಗಿಕ ರಸಾಯನ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಭೌತವಿಜ್ಞಾನ, ಸಸ್ಯವಿಜ್ಞಾನ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಪ್ರಾಣಿ ವಿಜ್ಞಾನ ಹಾಗೂ ಎಂ.ಕಾಂ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೂ ಚಿನ್ನದ ಪದಕ, ನಗದು ಬಹುಮಾನ ನೀಡಲಾಗುವುದು’ ಎಂದು ಹೇಳಿದರು.

ಕುಲಸಚಿವ ಎನ್.ಹೇಮಂತ್, ಮೌಲ್ಯಮಾಪನ ಕುಲಸಚಿವ ಪ್ರೊ.ಆರ್.ತಿಮ್ಮರಾಯಪ್ಪ, ವಾಣಿಜ್ಯ ವಿಭಾಗದ ಡೀನ್ ಪ್ರೊ. ರಮೇಶ್, ಕಲಾ ವಿಭಾಗದ ಡೀನ್ ಪ್ರೊ.ರಾಜಾನಾಯ್ಕ, ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಎಂ.ಆರ್.ಸತ್ಯಪ್ರಕಾಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-42-698123645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.