ಶಿವಮೊಗ್ಗ: ‘ಕೃತಕ ಬುದ್ಧಿಮತ್ತೆ (ಎಐ) ಮತ್ತು ಯಂತ್ರ ಕಲಿಕೆಯಂತಹ ಅತ್ಯಾಧುನಿಕ ತಂತ್ರಜ್ಞಾನಗಳು ಕೇವಲ ತಾಂತ್ರಿಕ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಬಾರದು. ಸಮಾಜ ವಿಜ್ಞಾನ ಹಾಗೂ ಮಾನವಿಕ ವಿಷಯಗಳ ಸಂಶೋಧನೆಯಲ್ಲೂ ಅವುಗಳನ್ನು ಸಕಾರಾತ್ಮಕವಾಗಿ ಬಳಸಬೇಕು’ ಎಂದು ಕುಲಪತಿ ಶರತ್ ಅನಂತಮೂರ್ತಿ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಆಯೋಜಿ ಸಿದ್ದ ‘ಸಮಾಜ ವಿಜ್ಞಾನ ಮತ್ತು ಮಾನವಿಕ ವಿಷಯಗಳ ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯ ಬಳಕೆ’ ಕುರಿತು ಶನಿವಾರ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ತಂತ್ರಜ್ಞಾನ ನೀಡುವ ಉತ್ತರಗಳು ಯಾವುದೇ ಪೂರ್ವಾಗ್ರಹಗಳಿಂದ ಮುಕ್ತವಾಗಿರಬೇಕು. ಸಮಾಜ ವಿಜ್ಞಾನ ಅಧ್ಯಯನದಲ್ಲಿ ವೈಚಾರಿಕ ನೆಲೆ ಮತ್ತು ವಿಮರ್ಶಾತ್ಮಕ ದೃಷ್ಟಿಕೋನ ಅಗತ್ಯವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

‘ನವ ಉದಾರೀಕರಣದ ಪ್ರಭಾವ ದಿಂದ ವಿಶ್ವವಿದ್ಯಾಲಯಗಳ ಆದ್ಯತೆಗಳು ಬದಲಾಗುತ್ತಿವೆ. ಇಂಟರ್ನೆಟ್ ಯುಗದಲ್ಲಿ ತಂತ್ರಜ್ಞಾನವು ಕೆಲವೊಂದು ವರ್ಗಗಳ ಜ್ಞಾನಕ್ಕೆ ಮಾತ್ರ ಸೀಮಿತವಾಗುತ್ತಿರುವ ಅನುಮಾನ ಮೂಡುತ್ತಿದೆ. ತಂತ್ರಜ್ಞಾನದಲ್ಲಿರುವ ಪೂರ್ವಾಗ್ರಹಗಳನ್ನು ವಿಮರ್ಶಾತ್ಮಕವಾಗಿ ಪ್ರಶ್ನಿಸುವ ಅಗತ್ಯವಿದೆ’ ಎಂದು ಹೇಳಿದರು.

ಉಪನ್ಯಾಸ ನೀಡಿದ ಸ್ಕೋಪ್ಲೇಕ್ ಟೆಕ್ನಾಲಜೀಸ್ನ ಹಿರಿಯ ಎಂಜಿನಿಯರ್, ಡೇಟಾಬೇಸ್ ಮತ್ತು ಎಐ ವಿಭಾಗದ ವಿನಾಯಕ ಹಂಪಿಹೊಳಿ, ‘ಕೃತಕ ಬುದ್ಧಿಮತ್ತೆ ಕೇವಲ ಒಂದು ಸಾಫ್ಟ್ವೇರ್ ಅಲ್ಲ; ಅದು ಡೇಟಾ, ಗಣಿತ ಮತ್ತು ಸಂಕೀರ್ಣ ಮಾದರಿಗಳ ಮೇಲೆ ನಿರ್ಮಿತವಾಗಿರುವ ಬೃಹತ್ ತಾಂತ್ರಿಕ ವ್ಯವಸ್ಥೆ’ ಎಂದು ಹೇಳಿದರು.

‘ಎರಡನೇ ಮಹಾಯುದ್ಧದ ಸಂದರ್ಭ ಜರ್ಮನ್ ಜಲಾಂತರ್ಗಾಮಿ ನೌಕೆಗಳನ್ನು ಪತ್ತೆ ಹಚ್ಚುವುದು ಹಾಗೂ ರಹಸ್ಯ ಸಂದೇಶಗಳನ್ನು ಡಿಕೋಡ್ ಮಾಡುವ ಅಗತ್ಯದಿಂದ ಮಷಿನ್ ಲರ್ನಿಂಗ್ ಪರಿಕಲ್ಪನೆಗೆ ಅಡಿಪಾಯ ಬಿದ್ದಿತು. 1950ರಲ್ಲಿ ವಿಜ್ಞಾನಿ ಅಲನ್ ಟ್ಯೂರಿಂಗ್ ಪರಿಚಯಿಸಿದ ‘ಟ್ಯೂರಿಂಗ್ ಟೆಸ್ಟ್’ ಯಂತ್ರ ಬುದ್ಧಿಮತ್ತೆ ಕುರಿತು ಹೊಸ ಚರ್ಚೆಗೆ ಕಾರಣವಾಯಿತು’ ಎಂದರು.

‘ಸಾಮಾನ್ಯ ಕಂಪ್ಯೂಟರ್ ಪ್ರೋಗ್ರಾಂಗಳಲ್ಲಿ ಡೇಟಾ ಮತ್ತು ನಿಯಮಗಳನ್ನು ನೀಡಿದರೆ ಫಲಿತಾಂಶ ಸಿಗುತ್ತದೆ. ಆದರೆ ಮಷಿನ್ ಲರ್ನಿಂಗ್ನಲ್ಲಿ ಡೇಟಾ ಮತ್ತು ಫಲಿತಾಂಶಗಳನ್ನು ನೀಡಿದಾಗ ಕಂಪ್ಯೂಟರ್ ತಾನೇ ನಿಯಮಗಳನ್ನು ರೂಪಿಸಿಕೊಳ್ಳುತ್ತದೆ’ ಎಂದರು.

ಈ ಸಂದರ್ಭದಲ್ಲಿ ಪರೀಕ್ಷಾಂಗ ವಿಭಾಗದ ಕುಲ ಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಉಪಸ್ಥಿತರಿದ್ದರು. ಕಾರ್ಯಾಗಾರ ಸಂಯೋಜಕರಾದ ಸ್ನೇಹ ಎಂ.ಎ. ಸ್ವಾಗತಿಸಿದರು. ಡಾ. ಯೋಗರಾಜ್ ವಿ.ಎ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-258818772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.