ಶಿವಮೊಗ್ಗ: ‘ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯುನ್ನತ ಸಾಧನೆ ಮಾಡಲು ಶಾಸನಗಳಲ್ಲಿ ಅಡಕವಾಗಿರುವ ಕಾನೂನು ವ್ಯಾಖ್ಯಾನಗಳ ಆಳವಾದ ಅಧ್ಯಯನ ಅತ್ಯವಶ್ಯ’ ಎಂದು ನ್ಯಾಯಾಧೀಶರಾದ ಅನನ್ಯಾ ಶಾಸ್ತ್ರಿ ಹೇಳಿದರು.

ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನ್ಯಾಯಾಂಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕೇವಲ ಪದವಿ ಸಾಕಾಗುವುದಿಲ್ಲ. ಕಾನೂನುಗಳ ಅಂತರಾಳವನ್ನು ಅರ್ಥಮಾಡಿಕೊಳ್ಳುವ ಮನೋಭಾವ ಮತ್ತು ನಿರಂತರ ಅಧ್ಯಯನ ಅಗತ್ಯವಾಗಿದೆ. ಸೋಲಿನಿಂದ ಹೊಸ ಅನುಭವಗಳನ್ನು ಕಲಿಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಸೋಲಿನ ರುಚಿಯಿಂದ ಯಶಸ್ಸಿನ ಸಿಹಿ ಮತ್ತಷ್ಟು ದುಪ್ಪಟ್ಟಾಗುತ್ತದೆ’ ಎಂದು ಹೇಳಿದರು.

‘ಎಲ್ಲರನ್ನೂ ಸಂತೈಸುತ್ತೇನೆ ಎಂಬ ಭ್ರಮೆಯಲ್ಲಿ ಬದುಕಬಾರದು. ಬದುಕಿನ ದುರ್ಗಮ ಹಾದಿಯಲ್ಲಿ ಗುರಿ ತಲುಪಲು ಕಠಿಣ ಪರಿಶ್ರಮ, ತಾಳ್ಮೆ ಮತ್ತು ಆತ್ಮವಿಶ್ವಾಸ ಮುಖ್ಯವಾಗಿದೆ. ಎಂಎಸ್ಸಿ ಪದವಿ ಪಡೆದಿದ್ದ ನನಗೆ ಕಾನೂನು ಕಾಲೇಜಿನ ಉಪನ್ಯಾಸಕರು ನೀಡಿದ ಬೋಧನೆ ಸಮಾಜದ ಬಗ್ಗೆ ಹೊಸ ಕುತೂಹಲ ಹಾಗೂ ಕಾನೂನು ಕ್ಷೇತ್ರದತ್ತ ವಿಶೇಷ ಆಸಕ್ತಿ ಮೂಡಿಸಿತು’ ಎಂದು ಸ್ಮರಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಮಾತನಾಡಿದರು. ಎನ್ಇಎಸ್ ನಿರ್ದೇಶಕ ಎಂ.ಎಸ್. ಅನಂತದತ್ತ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ, ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಎಚ್.ಸಿ. ಶಿವಕುಮಾರ್, ಕಾಂತರಾಜ್ ಇದ್ದರು. ಕಾಲೇಜಿನ ಪ್ರಾಂಶುಪಾಲರಾದ ಎ. ಅನಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-42-281515705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.