ಶಿವಮೊಗ್ಗ: ‘ಗ್ರಾಮೀಣ ಶಿಬಿರವು ಕೇವಲ ಸೇವಾ ಚಟುವಟಿಕೆ ಮಾತ್ರವಲ್ಲ, ಅದು ವ್ಯಕ್ತಿತ್ವ ವಿಕಾಸಕ್ಕೆ ಒಂದು ಮಹತ್ವದ ವೇದಿಕೆ. ಸಮಾಜದೊಂದಿಗೆ ಬೆರೆತು, ಜನರ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮನೋಭಾವವನ್ನು ನೀವು ಇಲ್ಲಿ ಕಲಿಯುತ್ತೀರಿ’ ಎಂದು ಐಪಿಎಸ್ ಅಧಿಕಾರಿ ಮೇಘಾ ಅಗರವಾಲ್ ತಿಳಿಸಿದರು.

ಭದ್ರಾವತಿ ತಾಲ್ಲೂಕು ವಿಜಯನಗರ ಕಾಚಿಗೊಂಡನಹಳ್ಳಿ ಕೊಮಾರನಹಳ್ಳಿ ಗ್ರಾಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳ ವತಿಯಿಂದ ಸಾಮಾಜಿಕ ಕಾರ್ಯ ಶಿಬಿರಕ್ಕೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.

‘ಯುವಜನತೆ ಬಲವಾದರೆ ದೇಶ ಬಲವಾಗುತ್ತದೆ. ಆದ್ದರಿಂದ, ನಿಮ್ಮ ಶಕ್ತಿ ಮತ್ತು ಸಮಯವನ್ನು ಸಮಾಜದ ಸೇವೆಗೆ ಮೀಸಲಿಟ್ಟು, ಉತ್ತಮ ನಾಗರಿಕರಾಗಿ ಬೆಳೆದು ಬರಬೇಕು’ ಎಂದು ಕಿವಿಮಾತು ಹೇಳಿದರು.

‘ಈ ಶಿಬಿರದಿಂದ ನೀವು ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ನಿಮ್ಮ ಸೇವೆ ಸಣ್ಣದಾಗಿದ್ದರೂ, ಅದರ ಪರಿಣಾಮ ಸಮಾಜದಲ್ಲಿ ದೊಡ್ಡ ಬದಲಾವಣೆ ತರಬಹುದು’ ಎಂದರು.

ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾವ್ ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯ ಮಂಜುನಾಥ್ ಆರ್, ಮುಖ್ಯ ಶಿಕ್ಷಕ ಎಸ್. ಸಿದ್ದರಾಮಯ್ಯ, ಗ್ರಾಮ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸವಿತಾ, ಬಸವರಾಜ್, ಉಪನ್ಯಾಸಕರಾದ ಬಿ.ಜಿ.ರವಿಶಂಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-355973328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.