ಶಿವಮೊಗ್ಗ: ನಾಲ್ಕು ದಶಕಗಳ ಕಾಲ ನಾಡಿನ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಸ್ಮಿತೆಯೊಂದಿಗೆ ಸಮರ್ಥವಾಗಿ ಮುಖಾಮುಖಿ ಆದ ಪ್ರೊ.ಬಿ. ಕೃಷ್ಣಪ್ಪ ಅವರು ಕರ್ನಾಟಕದ ಬಹು ದೊಡ್ಡ ಹೋರಾಟಗಾರ ಎಂದು ಶ್ರೀಕೃಷ್ಣ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾoಶುಪಾಲ ಶಿವಬಸಪ್ಪ ಹೇಳಿದರು.

ಇಲ್ಲಿನ ಬಿ.ಎಚ್.ರಸ್ತೆಯ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೇಂದ್ರ ಕೇಂದ್ರ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿ.ಕೃಷ್ಣಪ್ಪ ಅವರ 29ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಆಲೋಚನೆಗಳನ್ನು ಕರ್ನಾಟಕದ ಕೇರಿ ಕೇರಿಗಳಲ್ಲಿ ಬಿತ್ತಿದ ಪ್ರೊ.ಬಿ.ಕೃಷ್ಣಪ್ಪ ಅವರು ಒಂದು ಹೊಸ ಸಾಂಸ್ಕೃತಿಕ ಪ್ರಜ್ಞೆಯ ವಲಯ ಕಟ್ಟುವ ಮೂಲಕ ದಲಿತರ ಬದುಕಿಗೆ ದಾರಿ ದೀಪವಾದರು ಎಂದು ಹೇಳಿದರು.

ವೇದಿಕೆಯಲ್ಲಿ ಡಿಎಸ್ಎಸ್ ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ಎಫ್ಸಿಐ ನಿವೃತ್ತ ನೌಕರ ಹನುಮಂತರಾಜು, ಭದ್ರಾವತಿಯ ಶ್ರೀನಿವಾಸ್, ಡಿಎಸ್ಎಸ್ ತಾಲ್ಲೂಕು ಸಂಚಾಲಕ ರಮೇಶ್ ಚಿಕ್ಕಮರಡಿ, ನಿವೃತ್ತ ಪ್ರೊಫೆಸರ್ ಚಂದ್ರಣ್ಣ ಜೋಗಿ, ಬೊಮ್ಮನಕಟ್ಟೆ ಕೃಷ್ಣ, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸೂರ್ಯ, ಭದ್ರಾವತಿ ತಾಲ್ಲೂಕು ಸಂಚಾಲಕ ಕಾಚಗೊಂಡನಹಳ್ಳಿ ನಾಗರಾಜ್, ಜೇಡಿಕಟ್ಟೆಯ ನಾಗರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಡಿಎಸ್ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-42-1082497881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.