ಶಿವಮೊಗ್ಗ: ‘ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟ ಮಹನೀಯರು’ ಎಂದು ಸಾಹಿತಿ ಪ್ರೊ. ಕುಮಾರಚಲ್ಯ ಬಣ್ಣಿಸಿದರು.

ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾರತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ಏರ್ಪಡಿಸಿದ್ದ ‘ಜಿ.ಎಸ್.ಶಿವರುದ್ರಪ್ಪ: ಮರು ಓದಿನ ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಮಾರೋಪ ಭಾಷಣ ಮಾಡಿದರು.

‘ಜಿಎಸ್ಎಸ್ ಅವರು ಸಜ್ಜನಿಕೆ, ಶಿಸ್ತು, ಸರಳತೆ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಆತ್ಮಾಭಿಮಾನದ ಸಂಗಮ ಆಗಿದ್ದರು. ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟರು. ಸಂಶೋಧನೆ, ಅಧ್ಯಯನ, ಅಧ್ಯಾಪನ ಮತ್ತು ಸೃಜನಶೀಲತೆಗೆ ಅನನ್ಯ ಕಾಣಿಕೆ ನೀಡಿದರು’ ಎಂದರು.

‘ಜಿಎಸ್ಎಸ್ ಕನ್ನಡ ಸಂಸ್ಕೃತಿಗೆ ಹೊಸ ಚಿಂತನೆಗಳನ್ನು ನೀಡಿದ್ದರು’ ಎಂದು ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರು ಅಭಿಪ್ರಾಯಪಟ್ಟರು.

ಸಾಹಿತಿ ಬಸವರಾಜ ಕಲ್ಗುಡಿ, ಕೇಶವ ಶರ್ಮಾ, ಹೊಸಳ್ಳಿ ದಾಳೇಗೌಡ, ಉಮಾಪತಿ, ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಸಿದ್ದೇಶ್, ಪ್ರೊ.ಚಂದ್ರಿಕಾ, ಪ್ರೊ.ನಾಗೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-744488998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.