ಶನಿವಾರಸಂತೆ: ‘ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಶಿಕ್ಷಣದಿಂದ ಮಾತ್ರ ಸಮಾಜ ಬದಲಾಯಿಸಬಹುದು’ ಶಾಸಕ ಡಾ.ಮಂತರ್ಗೌಡ ಹೇಳಿದರು.

ಇಲ್ಲಿಗೆ ಸಮೀಪದ ಮಾದ್ರೆ ಗ್ರಾಮದ ಡಾ.ಭೀಮ್ರಾವ್ ಯುವಕ ಸಂಘ ಹಾಗೂ ಗ್ರಾಮಾಭಿವೃದ್ದಿ ಸಮಿತಿ ವತಿಯಿಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಸಮ ಸಮಾಜದ ನಿರ್ಮಾಣಕ್ಕಾಗಿ ಜನಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಸಮಾಜದಲ್ಲಿ ಸ್ಥಾನಮಾನದಲ್ಲಿರುವವರಿಗೆ, ಜನಪ್ರತಿನಿಧಿಗಳಿಗೆ ಗೌರವ ಕೊಡುವುದು ಕೇವಲ ಅವರ ಹುದ್ದೆಗೆ ಅಲ್ಲ ಬದಲಿಗೆ ಅವರು ಪಡೆದುಕೊಂಡಿರುವ ಶಿಕ್ಷಣಕ್ಕೆ ಎಂಬುವುದನ್ನು ಅರಿಯಬೇಕು’ ಎಂದು ಹೇಳಿದರು.

‘ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಂವಿಧಾನದಲ್ಲಿ ಸ್ಥಾನಮಾನ, ಅಧಿಕಾರ ಒಂದು ಭಾಗವಾದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದು ಮತ್ತೊಂದು ಭಾಗವಾಗಿದೆ ಎಂಬುವುದನ್ನು ತಿಳಿಸಿಕೊಟ್ಟಿದ್ದಾರೆ’ ಎಂದರು.

‘ಪ್ರತಿಯೊಬ್ಬರೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಅಭಿವೃದ್ದಿ ಕಾರ್ಯದಲ್ಲಿ ಕೈಜೋಡಿಸಬೇಕು. ಈ ಭಾಗದಲ್ಲಿ ಮತ್ತಷ್ಟು ಗ್ರಾಮೀಣ ರಸ್ತೆ ಅಭಿವೃದ್ದಿ ಕಾರ್ಯ ಆಗಬೇಕಾಗಿದ್ದು ಈ ಬಗ್ಗೆ ಚಿಂತನೆ ಹರಿಸಲಾಗುವುದು’ ಎಂದು ಹೇಳಿದರು.

ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜೆ.ಆರ್.ಪಾಲಾಕ್ಷ, ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜನಾರ್ದನ್ ಮಾತನಾಡಿದರು.

ವೇದಿಕೆಯಲ್ಲಿ ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ಬಾಸ್, ಮಾದ್ರೆ ಜಯ್ ಭೀಮ್ ರಾವ್ ಯುವಕ ಸಂಘದ ಅಧ್ಯಕ್ಷ ಎಂ.ಕೆ.ಮಂಜುನಾಥ್, ಜಯಪ್ಪ ಹಾನಗಲ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-1334403414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.