ಶ್ರವಣಬೆಳಗೊಳ: ತಂತ್ರಜ್ಞಾನದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೇ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ನಲ್ಲಿ ಹೊಸ ಹೊಸ ಆವಿಷ್ಕಾರ ಮಾಡಬೇಕು ಎಂದು ಬೆಂಗಳೂರಿನ ಡಿಎಸ್ಎಡಿಫೈ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಪ್ರವೀಣ್ ಹೇಳಿದರು.

ಗೊಮ್ಮಟನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹ್ಯಾಕಥಾನ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಇದೊಂದು ಸಾಫ್ಟ್ವೇರ್ ಅಭಿವೃದ್ಧಿ ಪ್ರೋಗ್ರಾಮಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಸೃಜನಾತ್ಮಕ ಸ್ಪರ್ಧಾಯುಗವಾಗಿದೆ. ಹಾಗಾಗಿ ಅದರಲ್ಲಿ ಎಂತಹ ಸಮಸ್ಯೆಗಳು ಎದುರಾದರೂ ತಮ್ಮ ಜ್ಞಾನದ ಕೌಶಲ ಬಳಸಿಕೊಂಡು ಪರಿಹಾರಗಳನ್ನು ಸೂಚಿಸುವ ಅವಕಾಶವಿದ್ದು, ವೈಯಕ್ತಿಕ ಅಥವಾ ತಂಡವಾಗಿ ಪ್ರತಿಭೆಯ ಮೂಲಕ ಸಾಧಿಸಿ ತೋರಿಸುವ ಸುವರ್ಣಾವಕಾಶ ಇದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಿ.ಸುನೀಲ್ ಕುಮಾರ್ ಮಾತನಾಡಿ, ರಾಜ್ಯದ ಬಹುತೇಕ ಎಂಜಿನಿಯರಿಂಗ್ ಕಾಲೇಜುಗಳ ತಂಡ ಆಗಮಿಸಿದ್ದು, ನೂತನ ಆವಿಷ್ಕಾರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೇಗೆ ಪರಿಹರಿಸಬೇಕೆಂಬ ಸ್ಪರ್ಧೆಗಳು ನಡೆಯಲಿದ್ದು, ಸಾಮರ್ಥ್ಯ ಪ್ರದರ್ಶಿಸಲು ವಿದ್ಯಾರ್ಥಿಗಳಿಗೆ ಇದೊಂದು ಅವಕಾಶವಾಗಿದೆ ಎಂದರು.

ಸಂಯೋಜಕ ಪ್ರೊ. ನರಸಿಂಹಮೂರ್ತಿ ಮಾತನಾಡಿ, ರಾಜ್ಯಮಟ್ಟದ ಮೊದಲ ಸ್ಪರ್ಧೆ ಇದಾಗಿದ್ದು, 98 ತಂಡಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿವೆ. ಸ್ಪರ್ಧೆಯ ಕಾರ್ಯಾಗಾರಗಳು ಇಂದು ಮತ್ತು ನಾಳೆ ನಡೆಯಲಿವೆ ಎಂದರು. ಪ್ರೊ.ರಾಕೇಶ್, ಸಿಇಒ ರಾಜಕಿರಣ್ ಬಲ್ಲಾಳ್, ಉಪನ್ಯಾಸಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-36-1664857575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.