ಸಿದ್ದಾಪುರ: ಜಾನಪದ ಕಲೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾನಪದ ವೈಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ವಿಶೇಷ ಪ್ರತಿಭೆಯನ್ನೂ ಬೆಳೆಸಿಕೊಳ್ಳಬೇಕು. ತಾಯಂದಿರು ಮಕ್ಕಳಿಗೆ ಜಾನಪದ ಗೀತೆ, ಕಲೆಗಳನ್ನು ತಿಳಿಸಬೇಕು’ ಎಂದರು.

ಕಾಲೇಜಿನ ಪ್ರಾಚಾರ್ಯ ಸತೀಶ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜಿನ ಉಪನ್ಯಾಸಕರೆಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿ ಕೇಂದ್ರ ಪ್ರಾರಂಭಿಸಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಆನವಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಭೀಮಪ್ಪ ಆರ್.ಸಿ ಉಪನ್ಯಾಸ ನೀಡಿದರು. ಕಲಾವಿದ ಈಶ್ವರ ನಾಯ್ಕ ಹಸವಂತೆ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದಿಂದ ಕಾಲೇಜು ವರೆಗೆ ಜಾನಪದ ವೈಭವದ ಮೆರವಣಿಗೆ ಜರುಗಿತು. ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ಎನ್. ನಾಯ್ಕ ಇದ್ದರು. ಉಪನ್ಯಾಸಕ ನಾರಾಯಣ ಗೌಡ ಸ್ವಾಗತಿಸಿದರು. ರೇಖಾ ಮತ್ತು ಮಹಾಲಕ್ಷ್ಮಿ ನಿರೂಪಿಸಿದರು. ಸಾಂಸ್ಕೃತಿಕ ವೇದಿಕೆ ಸಂಚಾಲಕ ಗಣಪತಿ ಎಂ.ಬಿ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಈಶ್ವರ ನಾಯ್ಕ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-1233330629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.