ಸಿಂದಗಿ: ಪ್ರಸ್ತುತ ಸಂದರ್ಭದಲ್ಲಿ ಶಾಲಾ- ಕಾಲೇಜುಗಳ ಅಂಕಪಟ್ಟಿಗೆ ಮಹತ್ವವಿಲ್ಲ. ಅದರ ಜೊತೆಗೆ ಕೌಶಲ ಅಗತ್ಯವಾಗಿದೆ. ಸಂವಹನ ಕೌಶಲದ ಬೇಡಿಕೆ ಇದೆ ಎಂದು ವಿಜಯಪುರ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಉಪಕುಲಪತಿ ವೈ.ಎಂ.ಜಯರಾಜ ಸಲಹೆ ನೀಡಿದರು.

ನಗರದ ಸಾರಂಗಮಠದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಕರ ಬಗ್ಗೆ ಗೌರವವಿಲ್ಲ. ಮೊಬೈಲ್ ಗೀಳಿಗೆ ಅಂಟಿಕೊಂಡಿದ್ದಾರೆ. ಮೊಬೈಲ್ ದುರ್ಬಳಕೆ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಸಂಸ್ಥೆಯ ಚೇರ್ಮನ್ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿಭೆ, ಕ್ರಿಯಾಶೀಲತೆ ಇದ್ದಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.

ಸಮಾರಂಭದ ಸಮ್ಮುಖ ವಹಿಸಿದ್ದ ಸಾರಂಗಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗದ ಬೆನ್ನು ಹತ್ತದೆ ಕೃಷಿ ಕಡೆಗೂ ಗಮನ ಹರಿಸಬೇಕು ಎಂ ದರು.

ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜೆಮ್ಖಾನ್ ಚೇರ್ಮನ್ ಪ್ರೊ.ಪ್ರತಿಕಾ ತಳವಾರ ಕಾಲೇಜಿನ ಚಟುವಟಿಕೆಗಳ ವರದಿ ವಾಚಿಸಿದರು. ಪ್ರಾಧ್ಯಾಪಕ ನಾಗರಾಜ ಮುರಗೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ರವಿ ಗೋಲಾ ನಿರೂಪಿಸಿದರು.

ಐಕ್ಯೂಎಸಿ ಸಂಯೋಜಕ ಬಿ.ಆರ್.ಮಹಾಜನಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ಬೀರಲಿಂಗ ಗುಂಡಮನಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-26-1587535384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.