ಸಿಂದಗಿ: ವಿದ್ಯಾರ್ಥಿನಿಯರು ನೈತಿಕತೆ, ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು, ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರಲ್ಲೂ ಮೌಲ್ಯಗಳು ಕ್ಷೀಣಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ನಗರದ ಪೋಲಿಸ್ ಠಾಣೆ ಸಬ್ ಇನ್ಸ್ಪೆಕ್ಟರ್, ಶ್ರೀಕಾಂತ ಕಾಂಬಳೆ ವಿಷಾದಿಸಿದರು.

ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಮಾತನಾಡಿದರು.

ಪೂಜ್ಯ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಪ್ರಾಚಾರ್ಯ ಎಸ್.ಎಂ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಶಿಕ್ಷಣಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಪುರಸ್ಕೃತರಾದ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಜಗದೇವಿ ನಂದಿಕೋಲ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಬಿ.ಎಸ್.ಡಬ್ಲೂ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ ದೊಂದಿಗೆ ಚಿನ್ನದ ಪದಕ ಪಡೆದುಕೊಂಡ ಮೀನಾಜ್ ಗೋಲಗೇರಿ ಮತ್ತು ನಾಲ್ಕನೆಯ ರ್ಯಾಂಕ್ ಪಡೆದ ರಿಯಾನಾಬೇಗಂ ಬಂಕಲಗಿ ಮತ್ತು ಮಹಿಳಾ ವಿಶ್ವವಿದ್ಯಾಲಯ ಕೊಕ್ಕೊ ಆಟದಲ್ಲಿ ಬ್ಲ್ಯೂ ಆಗಿ ಆಯ್ಕೆಗೊಂಡ ಸಿದ್ದಮ್ಮ ಬಿರಾದಾರ ಹಾಗೂ ಶೈಲಜಾ ಪಾಟೀಲ ಅವರನ್ನು ಗೌರವಿಸಲಾಯಿತು.

ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಸಹಕಾರ್ಯದರ್ಶಿ ಅಶೋಕ ವಾರದ, ಪ್ರಾಚಾರ್ಯ ವಿ.ಡಿ.ಪಾಟೀಲ, ನಿವೃತ್ತ ಪ್ರಾಚಾರ್ಯ ಎಂ.ಎಸ್.ಹಯ್ಯಾಳಕರ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷೆ ಭಾಗ್ಯ ಬಬಲೇಶ್ವರ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂಗಮ್ಮ ಪೂಜಾರಿ ವೇದಿಕೆಯಲ್ಲಿದ್ದರು. ತಯ್ಯಾಬ ಮುಲ್ಲಾ, ತಬಸ್ಸುಮ್ ಮುಲ್ಲಾ, ಅನೀಲ ರಜಪೂತ, ಜಿ.ಎ.ನಂದಿಮಠ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-26-1050504186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.