ಸಿಂಧನೂರು: ಸ್ನಾತಕ ಕೋರ್ಸ್ಗಳ 2, 4 ಮತ್ತು 6ನೇ ಸೆಮಿಸ್ಟರ್ ಪರೀಕ್ಷಾ ಕಾರ್ಯವನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದಿಂದ ಮಂಗಳವಾರ ನಗರದ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕಾಲೇಜು ಶಿಕ್ಷಣ ಇಲಾಖೆಯ ಆದೇಶದಂತೆ ಅತಿಥಿ ಉಪನ್ಯಾಸಕರನ್ನು 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕೇವಲ ಐದಾರು ತಿಂಗಳು ಮಾತ್ರ ಕರ್ತವ್ಯದಲ್ಲಿ ಮುಂದುವರಿಸಿ, ನಂತರ ಇನ್ನೂ ಪ್ರಾಯೋಗಿಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿದ್ದರೂ ಏಕಾಏಕಿಯಾಗಿ ಕರ್ತವ್ಯದಿಂದ ಬಿಡುಗಡೆ ಮಾಡಿರುವುದು ತುಂಬಾ ವಿಷಾದನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮೇ 20ರಿಂದ ನಡೆಯುವ ಸ್ನಾತಕ ಕೋರ್ಸ್ಗಳ ಪರೀಕ್ಷಾ ಕಾರ್ಯ ನಿರ್ವಹಿಸುವುದಿಲ್ಲ. ಅದನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅತಿಥಿ ಉಪನ್ಯಾಸಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಬಾರದು ಎಂದು ತಾಲ್ಲೂಕು ಘಟಕದ ಗೌರವ ಅಧ್ಯಕ್ಷ ಮರಿಲಿಂಗಪ್ಪ ಆಗ್ರಹಿಸಿದರು. ಸದಸ್ಯರಾದ ಬಸವರಾಜ ಪಿ.ನಾಯಕ, ಶಂಕರ್ ಗುರಿಕಾರ, ಯರಿಯಪ್ಪ ಬೆಳಗುರ್ಕಿ, ಶಂಕರ್ ವಾಲಿಕರ್, ಮಹಾದೇವ ಗೋನವಾರ, ವೀರೇಶ್ ಕನ್ನಾರಿ, ವಿಜಯಲಕ್ಷ್ಮಿ ಕಟ್ಟಿ, ಶಿವಾ.ಕೆ, ಆಂಜನೇಯ, ವೀರರಾಜು ಗಜಾನಂದ, ಶ್ರೀನಿವಾಸ, ಕರಿಯಪ್ಪ, ಪವನ್ ಕುಮಾರ್, ವೆಂಕಟೇಶ್ ರೆಡ್ಡಿ ಹಾಗೂ ಮದಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-1965932932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.