ಸಿಂಧನೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಸನ್ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಅಧ್ಯಕ್ಷ ಕೆ.ಇರ್ಫಾನ್ ಮಾತನಾಡಿ, ‘ಕನ್ನಡ ಸಾಹಿತ್ಯ ಉಳಿಸಿ ಬೆಳೆಸಬೇಕಾದದ್ದು ಎಲ್ಲರ ಜವಾಬ್ದಾರಿ. ಪ್ರತಿನಿತ್ಯ ಕನ್ನಡ ಬಳಸಬೇಕು, ಭಾಷಾ ಶುದ್ಧತೆಯ ಕಡೆ ಗಮನ ಹರಿಸಬೇಕು’ ಎಂದು ತಿಳಿಸಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಬೀರಪ್ಪ ಶಂಭೋಜಿ ಮಾತನಾಡಿ, ‘ತಾಲ್ಲೂಕು ಸಮ್ಮೇಳನ ಕಡಿಮೆ ಆಗಿವೆ. ಜಿಲ್ಲಾ ಸಮ್ಮೇಳನ ನೆಡೆಯಬೇಕು’ ಎಂದು ಆಗ್ರಹಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಾಜಿ ಅಧ್ಯಕ್ಷ ವೆಂಕನಗೌಡ ವಟಗಲ್, ಕಸಾಪ ಜಿಲ್ಲಾ ಪ್ರತಿನಿಧಿ ರಮಾದೇವಿ ಶಂಬೋಜಿ ಮಾತನಾಡಿದರು.

ಎಸ್ಎಸ್ಎಲ್ಸಿಯಲ್ಲಿ ಕನ್ನಡದಲ್ಲಿ ಅತಿಹೆಚ್ಚು ಅಂಕಪಡೆದ ಕನ್ನಡ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವನಸಿರಿ ಫೌಂಡೇಶನ್ ಅಧ್ಯಕ್ಷ ಅಮರೇಗೌಡ ಮಲ್ಲಾಪುರ, ಬಸವ ಕೇಂದ್ರದ ಚಂದ್ರೇಗೌಡ ಹರೇಟನೂರ, ಸಾಹಿತ್ಯ ಪರಿಷತ್ ತಾಲೂಕ ಸಮಿತಿಯ ಸದಸ್ಯೆ ಲಕ್ಷ್ಮಿ ಪತ್ತಾರ್ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಫ್.ಮಸ್ಕಿ ಅಧ್ಯಕ್ಷತೆ ವಹಿಸಿದ್ದರು. ಶಾಂತ ಒಳಗಿನಮನಿ ನಿರೂಪಿಸಿದರು. ಎಚ್.ಎಂ.ಶ್ರೀಶೈಲ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-876562002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.