ಸಿರವಾರ: ‘ಕಡಲಾಳದಿಂದ ಮುತ್ತುಗಳನ್ನು ಹೆಕ್ಕಿ ತೆಗೆದು ಪೋಣಿಸಿದ ಮುತ್ತಿನಹಾರದಂತೆ ಕನ್ನಡ ಸುಂದರ ಮತ್ತು ಎಲ್ಲಾ ಭಾಷೆಗಳ ಲಿಪಿಗಿಂತ ಶ್ರೇಷ್ಟ ಲಿಪಿಯಾಗಿದೆ’ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದೇವದುರ್ಗಾ ತಾಲ್ಲೂಕು ಘಟಕದ ಉಪಾಧ್ಯಕ್ಷ ಶಿಕ್ಷಕ ಚನ್ನಬಸವ ಹೆಗ್ಗಡದಿನ್ನಿ ಹೇಳಿದರು.

ಪಟ್ಟಣದ ವಿನಾಯಕ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಮಂಗಳವಾರ ನಡೆದ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 17 ವಿದ್ಯಾರ್ಥಿಗಳು, ದ್ವಿತೀಯ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ 4 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಸಾಪ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಚುಕ್ಕಿ ಸೂಗಪ್ಪ ಸಾಹುಕಾರ ಮತ್ತು ಮುಖಂಡ ಜೆ.ಶರಣಪ್ಪಗೌಡ ಮಾತನಾಡಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮೌನೇಶ ಹಿರೇಹಣಗಿ, ಉಪನ್ಯಾಸಕ ಅರಳಪ್ಪ ಸೈದಾಪೂರು, ವಿನಾಯಕ ಪಿಯು ಕಾಲೇಜಿನ ಪ್ರಾಚಾರ್ಯ ಸತೀಶ ಕುಮಾರ, ವೆಂಕಟರೆಡ್ಡಿ ಬಲ್ಕಲ್, ಪತ್ತಾರ್ ನಾಗಪ್ಪ, ವೆಂಕಟೇಶ ದೊರೆ, ಅಮರೇಶ ದಿನ್ನಿ ಕವಿತಾಳ ಸೇರಿದಂತೆ ಕಸಾಪ ಸದಸ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-32-649930272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.