ಸಿರವಾರ: ‘ಕಾಲೇಜು ದಿನಗಳಲ್ಲಿ ನಾವು ರೂಢಿಸಿಕೊಳ್ಳುವ ಜ್ಞಾನ ಮತ್ತು ಶಿಸ್ತು ನಮ್ಮ ಭವಿಷ್ಯದ ಜೀವನಕ್ಕೆ ಸಹಕಾರಿಯಾಗಲಿದೆ’ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಸಮಿತಿಗಳ ಸಮಾರೋಪ ಹಾಗೂ ಬಿ.ಎ ಮತ್ತು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಇಂದಿನ ಸೆಮಿಸ್ಟರ್ ವ್ಯವಸ್ಥೆಯ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳ ಉತ್ತಮ ಅಭ್ಯಾಸಕ್ಕೆ ಅನುಕೂಲವಾಗಿದ್ದು, ಮುಂದಿನ ಜೀವನಕ್ಕೆ ಅವಶ್ಯಕತೆ ಇರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ತಯಾರಿ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶಿವಣ್ಣ ವಕೀಲ ಮಾತನಾಡಿ,‘ ಇಲ್ಲಿನ ಕಾಲೇಜಿನಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದ್ದು, ಶ್ಲಾಘನೀಯ ಕೆಲಸವಾಗಿದೆ’ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಬ್ರಿಜೇಶ ಪಾಟೀಲ, ಪ.ಪಂ ಅಧ್ಯಕ್ಷ ಹಾಜಿ ಚೌದ್ರಿ, ಪ್ರಾಂಶುಪಾಲ ಹನುಮಂತ ಕೋರಾಪುರ, ಮುಖಂಡರಾದ ಚುಕ್ಕಿ ಉಮಾಪತಿ, ಸೂರಿ ದುರುಗಣ್ಣ ನಾಯಕ, ವೆಂಕಟೇಶ ದೊರೆ, ಪ್ರಾಧ್ಯಾಪಕರಾದ ಲಕ್ಷ್ಮಣ ಯಾದವ, ಸುಭಾನ್ ಸಾಬ್, ವಿನಯ ಶಂಕರ, ರಾಜಶೇಖರ, ಮುತ್ತಪ್ಪ, ಪದ್ಮಾವತಿ, ಈರನಗೌಡ, ರಮೇಶ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-32-1598735853

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.