ಶಿರಸಿ: ‘ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತದಲ್ಲಿಯೇ ವಿದ್ಯಾರ್ಥಿಗಳ ತಾಂತ್ರಿಕ ಕೌಶಲವನ್ನು ಹೆಚ್ಚಿಸಲು ಸ್ಟೆಮ್ ಲ್ಯಾಬ್ಗಳು ಹೆಚ್ಚು ಸಹಾಯಕಾರಿ’ ಎಂದು ಶಾಲಾ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಈಚೆಗೆ ಸ್ಕೊಡ್ವೆಸ್ ಸಂಸ್ಥೆ ಹಾಗೂ ಗುಜರಾತ್ನ ದೇಸಾಯಿ ಫೌಂಡೇಶನ್ ಸಹಯೋಗದಲ್ಲಿ ಸ್ಥಾಪಿಸಲಾದ ಸ್ಟೆಮ್ ಲ್ಯಾಬ್ಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳ ತಾಂತ್ರಿಕ ಪ್ರತಿಭೆ ಗುರುತಿಸಲು ಇಂತಹ ಸೌಲಭ್ಯಗಳನ್ನು ರಾಜ್ಯದ ಕೆ.ಪಿ.ಎಸ್. ಶಾಲೆಗಳಲ್ಲೂ ಅಳವಡಿಸಲಾಗುವುದು’ ಎಂದರು.

ಸರ್ಕಾರಿ ಶಾಲಾ ಮಕ್ಕಳಿಗಾಗಿ ಇಂತಹ ಆಧುನಿಕ ವ್ಯವಸ್ಥೆ ಕಲ್ಪಿಸಿದ ಸಂಸ್ಥೆಗಳನ್ನು ಸಚಿವರು ಇದೇ ವೇಳೆ ಅಭಿನಂದಿಸಿದರು.

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ‘ಸ್ಟೆಮ್ ಲ್ಯಾಬ್ ಬಳಕೆಯಿಂದ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆಯಲು ಸಾಧ್ಯವಾಗುತ್ತಿದೆ’ ಎಂದರು.

ಇದೇ ಸಂದರ್ಭದಲ್ಲಿ ಸ್ಕೊಡ್ವೆಸ್ ಸಂಸ್ಥೆಯಿಂದ ಉಚಿತವಾಗಿ ಪೂರೈಸಲಾಗುತ್ತಿರುವ ಆಸಾನಿ ಸ್ಯಾನಿಟರಿ ನ್ಯಾಪ್ಕಿನ್ ಯೋಜನೆ ಬಗ್ಗೆ ಮಾಹಿತಿ ಪಡೆದ ಸಚಿವರು, ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು. ಡಿಡಿಪಿಐ ಡಿ.ಆರ್.ನಾಯ್ಕ, ಬಿಇಒ ನಾಗರಾಜ ನಾಯ್ಕ, ಪ್ರೊ.ಕೆ.ಎನ್.ಹೊಸಮನಿ ಹಾಗೂ ನಾರಾಯಣ ಹೆಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-2002144506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.