ಸಿರುಗುಪ್ಪ: ‘ಯುವ ಕವಿಗಳು ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು’ ಎಂದು ಜ್ಞಾನಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ದಮ್ಮೂರು ಮಲ್ಲಿಕಾರ್ಜುನ ಹೇಳಿದರು.

ನಗರದ ಜ್ಞಾನಭಾರತಿ ಪದವಿ ಕಾಲೇಜಿನ ಸಭಾಂಗಣದಲ್ಲಿ ನೇತ್ರ ಕಲಾ ಸಂಘದ ವತಿಯಿಂದ ಈಚೆಗೆ ನಡೆದ ಯುಗಾದಿ ಕವಿಗೋಷ್ಠಿ ಹಾಗೂ ಗಾನ ಸಿಂಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾಮಾಜಿಕ ಪಿಡುಗುಗಳು, ಬಡತನ, ಅನಕ್ಷರತೆ, ಭ್ರಷ್ಟಾಚಾರ, ಮಾನವೀಯ ಸಂಬಂಧಗಳ ಕುರಿತು ಯುವಕರು ಕವನ ಬರೆಯಬೇಕು. ಸಮಾಜದ ಓರೆ–ಕೋರೆಗಳನ್ನು ತಿದ್ದಬೇಕು’ ಎಂದರು.

ಕರ್ನಾಟಕ ಬಯಲಾಟ ಕಲಾವಿದರ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವನಾಥ್ ಸಾಹುಕಾರ, ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ, ಜಾನಪದ ಕಲಾವಿದ ಸಾಧುರಾಯಪ್ಪ, ಪ್ರಾಂಶುಪಾಲ ಅಯ್ಯಣ್ಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೆ.ಎಂ. ಚಂದ್ರಕಾಂತ, ನೇತ್ರ ಕಲಾ ಸಂಘದ ಕಾರ್ಯದರ್ಶಿ ವೀರೇಶ್ ದಳವಾಯಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-25-272031527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.