ಸೋಮವಾರಪೇಟೆ: ಕೆಲವು ಅಂಗನವಾಡಿ ಕೇಂದ್ರಗಳು ಮಕ್ಕಳ ಕೊರತೆಯನ್ನು ಎದುರಿಸುತ್ತಿದ್ದು, ಅದಕ್ಕಾಗಿ ಚಿಕ್ಕ ಮಕ್ಕಳನ್ನು ತಿದ್ದಿ ತೀಡುವ ಕೆಲಸ ಮಾಡುತ್ತಿರುವ ಅಂಗನವಾಡಿಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿವರೆಗಿನ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಬೇಕು. ಇದರೊಂದಿಗೆ ತರಗತಿ ನಡೆಸಲು ಎಲ್ಲ ರೀತಿಯ ಸವಲತ್ತುಗಳನ್ನು ಸರ್ಕಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀದೇವಿ ಬಿ. ಮುದೋಳ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ತಾಲ್ಲೂಕು ಸ್ತ್ರೀಶಕ್ತಿ ಭವನದಲ್ಲಿ ಶನಿವಾರ ನಡೆದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಹಾಮಂಡಲದ ಟಿಯುಸಿಸಿ ಸಂಘಟನೆಯ 2015-26ನೇ ಸಾಲಿನ ವಾರ್ಷಿಕ ಮಹಾಸಭೆ, ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಕೆಲಸ ಮಾಡುವ ಸಂದರ್ಭ ಎಲ್ಲರೂ ಒಗ್ಗಟ್ಟಾಗಿ ಹೋರಾಡಿದಲ್ಲಿ ಮಾತ್ರ ಸವಲತ್ತುಗಳನ್ನು ಪಡೆಯಲು ಸಾಧ್ಯ, ಯಾವುದೇ ಇಲಾಖೆಯಲ್ಲಿ ಮೇಲಧಿಕಾರಿಗಳ ಸಹಕಾರದೊಂದಿಗೆ ಎಲ್ಲರು ಕೆಲಸ ಮಾಡಬೇಕಿದ್ದು, ಒತ್ತಡದಿಂದ ನಿರಂತರವಾಗಿ ಕೆಲಸ ಮಾಡಬೇಕಿದೆ. ಇದರಿಂದಾಗಿ ನಮಗೆ ಮತ್ತು ಕುಟುಂಬಕ್ಕೆ ಸಮಯ ವಿನಿಯೋಗಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಪುರುಷಪ್ರಧಾನ ಸಮಾಜದಲ್ಲಿ ಮಹಿಳೆಯರು ತ್ಯಾಗ ಮಾಡಿ ಸಾಧನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾಧನೆ ಮಾಡಲು ನಾವು ತಾಳ್ಮೆ, ಏಕಾಗ್ರತೆಯೊಂದಿಗೆ ಚಾಕಚಕ್ಯತೆಯಿಂದ ಇರುವ ಅವಕಾಶವನ್ನು ಬಳಸಿಕೊಳ್ಳಬೇಕು. ಎಲ್ಲರೂ ಧನಾತ್ಮಕವಾಗಿ ಚಿಂತಿಸಿದ್ದಲ್ಲಿ ಮಾತ್ರ ಗುರಿ ಮುಟ್ಟಲು ಸಾಧ್ಯ’ ಎಂದರು.

ಅಂಗನವಾಡಿ ನಿವೃತ್ತ ಶಿಕ್ಷಕಿ ಕೆ.ಕೆ. ಶಾರದ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರು ಊರಿನ ತಾಯಿಯಾಗಿ ಕೆಲಸ ಮಾಡಬೇಕು. ನಮ್ಮ ಅವಧಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಸ್ವಂತ ಮನೆಗಳಂತೆ ನಿರ್ವಹಿಸುತಿದ್ದೆವು. ಗರ್ಭಿಣಿ, ಬಾಣಂತಿಯರು, ಮಕ್ಕಳು ಸೇರಿದಂತೆ ಎಲ್ಲರ ಸೇವೆಯನ್ನು ಮಾಡಲಾಗುತ್ತಿದೆ. ಯಾವುದೇ ಶಿಕ್ಷಕಿ ಪ್ರಾಮಾಣಿಕವಾಗಿ ಕೆಲಸ ಮಾಡಿದಲ್ಲಿ ಮೇಲಧಿಕಾರಿಗಳಿಗೆ ಹೆದರುವ ಅವಶ್ಯಕತೆ ಇಲ್ಲ. ಹಿಂದೆ ಕಡಿಮೆ ಸಂಖ್ಯೆಯಲ್ಲಿದ್ದ ಅಂಗನವಾಡಿ ಕೇಂದ್ರಗಳು ದಿನಕಳೆದಂತೆ ಎಲ್ಲೆಡೆ ಅಂಗನವಾಡಿ ಸಂಖ್ಯೆ ಹೆಚ್ಜಾಗಿವೆ. ಎಲ್ಲರೂ ಊರಿನವರೊಂದಿಗೆ ಹೊಂದಾಣಿಕೆಯೊಂದಿಗೆ ನಮ್ಮ ಕೇಂದ್ರದ ಸುತ್ತಲಿನ ಸಮಸ್ಯೆಗಳನ್ನು ಪರಿಹಾರಿಸಲು ಪ್ರಾಮಾಣಿಕ ಕೆಲಸ ಮಾಡಿದಲ್ಲಿ ಮಾತ್ರ ನಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯ’ ಎಂದು ತಿಳಿಸಿದರು.

ಮೇಲ್ವಿಚಾರಕಿ ಸಾವಿತ್ರವ್ವ ಮರಿಗೌಡ ಹಾಗೂ ನಿವೃತ್ತ ಅಂಗನವಾಡಿ ಶಿಕ್ಷಕಿ ಕೆ.ಕೆ. ಶಾರದ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಟಿಯುಸಿಸಿ ತಾಲ್ಲೂಕು ಘಟಕದ ಅಧ್ಯಕ್ಷೆ ಧನಲಕ್ಷ್ಮೀ ವಹಿಸಿದ್ದರು. ವೇದಿಕೆಯಲ್ಲಿ ಟಿಯುಸಿಸಿ ಉಪಾಧ್ಯಕ್ಷೆ ಜಯ, ಪ್ರಧಾನ ಕಾರ್ಯದರ್ಶಿ ತಾರಾ ಲೋಬೋ. ಖಜಾಂಚಿ ಗೀತಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-51-425194954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.