ಸೋಮವಾರಪೇಟೆ: ‘ನಾವು ಪ್ರತಿಷ್ಠಾನ ಮತ್ತು ಗುಡ್ ಮೈಂಡ್ಸ್ ಸಹಯೋಗದಲ್ಲಿ ಏಪ್ರಿಲ್ 10ರಿಂದ 25 ರವರೆಗೆ ಮಹಿಳಾ ಸಹಕಾರ ಸಮಾಜ ಆವರಣದಲ್ಲಿ ‘ಮಕ್ಕಳ ಬಾಲ್ಯ ಕಟ್ಟುವ ಹಬ್ಬ’ ಶಿರ್ಷಿಕೆಯಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಗೌತಮ್ ಕಿರಗಂದೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಈ ಶಿಬಿರವು ಮಕ್ಕಳ ಸಮಗ್ರ ಅಭಿವೃದ್ದಿಗೆ ಅನುಭವಾತ್ಮಕ ಕಲಿಕೆಯನ್ನು ಒದಗಿಸುವ ಉದ್ದೇಶ ಹೊಂದಿದೆ. ಇಂದಿನ ಏಐ ಮತ್ತು ಗ್ಯಾಜೆಟ್ ಗಳ ಯುಗದಲ್ಲಿ ಮಕ್ಕಳು ನಿಸರ್ಗದಿಂದ ದೂರವಾಗುತ್ತಿರುವ ಹಿನ್ನೆಲೆಯಲ್ಲಿ, ಅವರ ಬಾಲ್ಯವನ್ನು ಸುಂದರ ಹಾಗೂ ಸುರಕ್ಷಿತವಾಗಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಬಿರದಲ್ಲಿ ಜೀವನ ಕೌಶಲ್ಯಗಳು, ಹಳೆಯ ಆಟಗಳ ಪರಿಚಯ, ಕ್ಷೇತ್ರ ಭೇಟಿ, ಸೃಜನಶೀಲ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮಕ್ಕಳಲ್ಲಿ ಕೌಶಲ ಬೆಳೆಸಬೇಕು ಎಂಬುದರ ಬಗ್ಗೆ ಚರ್ಚೆಗಳಾಗುತ್ತಿದ್ದು, ಆ ಬಗ್ಗೆ ಗಮನಹರಸಿದ್ದೇವೆ’ ಎಂದು ಹೇಳಿದ್ದಾರೆ.

‘ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದ್ದು, 6ರಿಂದ 16 ವರ್ಷದ ಮಕ್ಕಳಿಗೆ ಪ್ರವೇಶವಿದೆ. ಮಕ್ಕಳ ಹಕ್ಕುಗಳ ಕಾರ್ಯಕರ್ತರಾದ ಸುಮನ ಅವರು ಶಿಬಿರಾರ್ಥಿಗಳಿಗೆ ಜೀವನ ಕೌಶಲ್ಯಗಳ ಮತ್ತು ಹಳೆಯ ಆಟಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ವಿವಿಧ ಕ್ಷೇತ್ರಗಳ 15 ಕ್ಕೂ ಹೆಚ್ಚು ಅನುಭವಿ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಲಿದ್ದಾರೆ. ಮಾಹಿತಿಗಾಗಿ ಮೊ.ಸಂ 9880050881 ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-676343984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.