ಸೊರಬ: ‘ಚನ್ನಯ್ಯ ಸಮಾಜ ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದೆ. ಇದನ್ನು ಸರ್ಕಾರ ಗುರುತಿಸಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರಬೇಕು’ ಎಂದು ಅಖಿಲ ಕರ್ನಾಟಕ ಚನ್ನಯ್ಯ (ಬಲಗೈ) ಸಮಾಜ ಅಭಿವೃದ್ಧಿ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ್ ದೊಡ್ಮನಿ ಆಗ್ರಹಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ಅಖಿಲ ಕರ್ನಾಟಕ ಚನ್ನಯ್ಯ (ಬಲಗೈ) ಸಮಾಜ ಅಭಿವೃದ್ಧಿ ಹೋರಾಟ ಸಮಿತಿಯ ಶಿವಮೊಗ್ಗ ಹಾಗೂ ಸೊರಬ ಶಾಖೆ ವತಿಯಿಂದ ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ರಾಜ್ಯದಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ ಸಮುದಾಯದವರ ಜನಸಂಖ್ಯೆ 2 ಲಕ್ಷ ಇದೆ. ಚನ್ನಯ್ಯ ಸಮಾಜದ ಸಂಘಟನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳನ್ನು ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲಾಗುತ್ತಿದೆ. ನೌಕರರನ್ನು ಗುರುತಿಸಲಾಗುತ್ತಿದೆ. ಸಮಾಜದ ಪ್ರತಿಯೊಬ್ಬರು ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಲು ಶ್ರಮಿಸಬೇಕು ಹಾಗೂ ಸಂಘಟಿತರಾಗಬೇಕು’ ಎಂದು ಹೇಳಿದರು.

‘ಮಾನವ ಕುಲ ಒಂದೇ ಎಂಬುದು ಎಂದಿಗೂ ಅಳಿಸಲಾಗದ ಸತ್ಯ. ಜಾತಿ, ಮತ, ಧರ್ಮಗಳು ಮನುಷ್ಯ ಸೃಷ್ಟಿಯೇ ಹೊರತು ಪ್ರಕೃತಿದತ್ತವಾದವುಗಳಲ್ಲ. ಹೀಗಾಗಿ, ಜಾತಿ ಭೇದ ಮಾಡದೆ ಎಲ್ಲರಿಗೂ ಧಾರ್ಮಿಕ, ಸಾಮಾಜಿಕ ನ್ಯಾಯ ಸಿಗಬೇಕು. ಅಳಿವಿನ ಅಂಚಿನ ಸಮುದಾಯಗಳು ಮೂಢ ನಂಬಿಕೆ, ಕಂದಾಚಾರ, ಕೀಳರಿಮೆಯಿಂದ ಹೊರಬಂದು ಶಿಕ್ಷಣಕ್ಕೆ ಆದ್ಯತೆ ನೀಡಿದಲ್ಲಿ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಚನ್ನಯ್ಯ ಸಮಾಜದವರು ಮುಂದಾಗಲಿ’ ಎಂದು ಉಪನ್ಯಾಸಕ ಎಂ.ನೀಲೇಶ್ ತಿಳಿಸಿದರು.

ಶಿವಮೊಗ್ಗ ಅಖಿಲ ಕರ್ನಾಟಕ ಚನ್ನಯ್ಯ (ಬಲಗೈ) ಸಮಾಜ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಪ್ಪ ಭೈರೇಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.

ರಾಜ್ಯ ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪ ಕೋಟೆ, ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ಎ.ಕೆ.ನಾಗರಾಜ್, ನವೀನ್ ಕುಮಾರ್, ರಂಗಪ್ಪ ಹೊನ್ನೇಸನ, ಪ್ರಧಾನ ಕಾರ್ಯದರ್ಶಿ ಮಂಜಪ್ಪ ಅಲಗೇರಿ ಮಂಡ್ರಿ, ಶಿವಮೊಗ್ಗ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸುಬ್ಬಪ್ಪ ಕಾಗೋಡು, ಕಾರವಾರ ಜಿಲ್ಲಾ ಘಟಕದ ಅಧ್ಯಕ್ಷ ಷಣ್ಮುಖ ಬಿ.ತಳವಾರ, ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಕಾಂತ, ಶಿವಮೊಗ್ಗ ಚನ್ನಯ್ಯ ಸಮಾಜದ ಸಾಮಾಜಿಕ ಶೈಕ್ಷಣಿಕ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಎಂ.ಕೃಷ್ಣಮೂರ್ತಿ, ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್ ಕಾಸರಗುಪ್ಪೆ, ಸಾಗರ ಶಾಖೆ ಅಧ್ಯಕ್ಷ ಸೋಮಶೇಖರ್ ವೀರಾಪುರ, ಜಗದೀಶ್, ಮಂಜಪ್ಪ, ಗಣಪತಿ, ಅನುರಾಧಾ, ಉಮೇಶ್, ಕೃಷ್ಣಮೂರ್ತಿ, ಶಿವಣ್ಣ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-42-1611194205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.