ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಸುಡು ಬಿಸಿಲನ್ನು ಲೆಕ್ಕಿಸದೆ ದಾಖಲಾತಿ ಆಂದೋಲನ ನಡೆಸಿದರು.

ಗ್ರಾಮದ ಮನೆ ಮನೆಗೆ ತೆರಳಿ ಪೋಷಕರಿಗೆ ಸರ್ಕಾರಿ ಶಾಲೆಯಲ್ಲಿರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿ ಸರ್ಕಾರಿ ಶಾಲೆಗೆ ಸೇರಿಸಿ, ಶಾಲೆಯನ್ನು ಉಳಿಸಿ ಎಂದು ಮನವಿ ಮಾಡಿದರು.

ಈ ವೇಳೆ ಮುಖ್ಯ ಶಿಕ್ಷಕಿ ಸುನಂದಮ್ಮ ಮಾತನಾಡಿ, ಸರ್ಕಾರದ ಆದೇಶದಂತೆ ಈ ವರ್ಷ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮವೂ ಆರಂಭವಾಗಲಿದೆ. ಹಾಗಾಗಿ ಪೋಷಕರು ಹೆಚ್ಚು ಶುಲ್ಕ ಕಟ್ಟಿ ಖಾಸಗಿ ಶಾಲೆಗೆ ಕಳುಹಿಸುವ ಬದಲು ಸರ್ಕಾರಿ ಶಾಲೆಗೆ ಸೇರಿಸಿ ಎಂದರು.

ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿಯಿಂದ 5ನೇ ತರಗತಿ ವರೆಗೆ ಆಂಗ್ಲ ಮಾಧ್ಯಮ ಪ್ರಾರಂಭವಾಗಲಿದೆ. ದಾಖಲಾತಿಯಾದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ, ಟ್ರಾಕ್ ಸೂಟ್ ಅನ್ನು ದಾನಿಗಳು ಉಚಿತವಾಗಿ ವಿತರಿಸಲಿದ್ದಾರೆ. ಹಾಗಾಗಿ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಸಹ ಶಿಕ್ಷಕರಾದ ಕವಿತಾ, ಸುಕನ್ಯ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-18-1775045081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.