ಶ್ರೀರಂಗಪಟ್ಟಣ: ‘ಮೊಬೈಲ್ ಫೋನ್ ಬಳಕೆ ಸೃಜನಶೀಲತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಪೋಷಕರು ಮಕ್ಕಳನ್ನು ಮೊಬೈಲ್ ಫೋನ್ ಮತ್ತು ಟಿವಿಗಳಿಂದ ಸಾಧ್ಯವಾದಷ್ಟು ದೂರ ಇಡಬೇಕು’ ಎಂದು ದರಸಗುಪ್ಪೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೆ.ಆರ್. ಕೃಷ್ಣಪ್ಪಗೌಡ ಸಲಹೆ ನೀಡಿದರು.

ತಾಲ್ಲೂಕಿನ ದರಸಗುಪ್ಪೆ ಗ್ರಾಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಗ್ರಾ.ಪಂ. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ ನಡೆಯುತ್ತಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ‘ಅಕ್ಕರೆಯ ಅಂಗಳ’ ದ ಶಿಬಿರಾರ್ಥಿಗಳಿಗೆ ಎ.ಎಸ್. ಬಂಡಿಸಿದ್ದೇಗೌಡ ಪ್ರತಿಷ್ಠಾನದಿಂದ ಶುಕ್ರವಾರ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.

‘ಮಕ್ಕಳನ್ನು ಕತೆ ಹೇಳುವ, ಚಿತ್ರ ಬರೆಯುವ, ಹಾಡು ಹೇಳುವ, ಮಣ್ಣಿನ ಮಾದರಿಗಳನ್ನು ತಯಾರಿಸುವ ಚಟುವಟಿಕೆಗಳು ಮತ್ತು ಈಜು ಇತರ ಆಟೋಟಗಳಲ್ಲಿ ತೊಡಿಸಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಕ್ಷಮತೆ ಹೆಚ್ಚುತ್ತದೆ. ಹೊಸ ಆಲೋಚನೆಗಳು ಮೂಡುತ್ತವೆ. ಅಂತಹ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಅಕ್ಕರೆಯ ಅಂಗಳ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಗ್ರಾ.ಪಂ. ಆಡಳಿತಾಧಿಕಾರಿ ಕಾಂತರಾಜು, ಮಾಜಿ ಅಧ್ಯಕ್ಷ ಮೋಹನಕುಮಾರ್ (ಮುರಳಿ), ಮಾಜಿ ಉಪಾಧ್ಯಕ್ಷ ಶ್ರೀಧರ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಪ್ರಾಣೇಶ್, ಆರ್.ಎನ್. ಗುರುಪ್ರಸಾದ್, ಮುಖಂಡರಾದ ಮನು, ಪರಮೇಶ್, ಅರುಣ, ಗ್ರಾ.ಪಂ. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಅನಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-40-928367224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.