ಶ್ರೀರಂಗಪಟ್ಟಣ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆಯ 2026–31ರ ಸಾಲಿಗೆ ಅಧ್ಯಕ್ಷರಾಗಿ ಡಿ.ಎನ್. ಲೋಕೇಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ಸಂಘದ ನಿಕಟ ಪೂರ್ವ ಅಧ್ಯಕ್ಷರಾಗಿದ್ದ ಡಿ.ಎನ್. ಲೋಕೇಶ್ ಎರಡನೇ ಅವಧಿಗೂ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆಯಾದರು. ಲೋಕೇಶ್ ಹೊರತುಪಡಿಸಿ ಇತರರು ನಾಮಪತ್ರ ಸಲ್ಲಿಸದ ಕಾರಣ ಡಿ.ಎನ್. ಲೋಕೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ವಿ. ನಂದೀಶ್ ಪ್ರಕಟಿಸಿದರು.

ಉಪಾಧ್ಯಕ್ಷರಾಗಿ ಭಾಗ್ಯಮ್ಮ ಪಿ.ಬಿ, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ.ಸಿ ಹಾಗೂ ಖಜಾಂಚಿಯಾಗಿ ರಾಘವೇಂದ್ರ.ಎಚ್ ಕೂಡ ಅವಿರೋಧವಾಗಿ ಆಯ್ಕೆಗೊಂಡರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಿ.ಎನ್. ಲೋಕೇಶ್, ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ 55 ವರ್ಷಗಳ ಇತಿಹಾಸವಿದೆ. ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಮತ್ತು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಂಘವು ಇಲಾಖೆಯ ಜತೆಗೂಡಿ ಕೆಲಸ ಮಾಡುತ್ತಿದೆ. ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದೆ. ಸಂಘದ ಪದಾಧಿಕಾರಿಗಳ ಜತೆಗೂಡಿ ಎಲ್ಲ ಶಿಕ್ಷಕರ ಹಿತ ಕಾಪಾಡಲು ಕಟಿಬದ್ದನಾಗಿ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕಿ ಜಿ.ಬಿ. ಮಂಜುಳಾ, ಸದಸ್ಯರಾದ ಮಾದೇಗೌಡ, ಪ್ರಕಾಶ್, ಸಿ.ಟಿ. ರಮೇಶ್, ಸುನೀತಾ, ಮಧುಸೂದನ್, ನಿವೃತ್ತ ಶಿಕ್ಷಕರಾದ ಚ. ನಾರಾಯಣಸ್ವಾಮಿ, ಬಿ.ಪಿ. ಪ್ರಕಾಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-559979007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.