ಪದವೀಧರರೇ ಗಮನಿಸಿ: ಆಗಸ್ಟ್ 13ರಿಂದ ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಕಾರ್ಯನಿರ್ವಹಿಸುವ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) 2021ರ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ (ಸಿಜಿಎಲ್)ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮೊದಲ ಹಂತದ ಪರೀಕ್ಷೆ ಅಗಸ್ಟ್ 13ರಿಂದ 28ರವರೆಗೆ ನಡೆಯಲಿದೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೇಶದ ನಾನಾ ಭಾಗಗಳಲ್ಲಿ ಪರೀಕ್ಷೆ ನಡೆಯಲಿದೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಸಿಜಿಎಲ್ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಗ್ರೂಪ್ ಬಿ ಮತ್ತು ಸಿ ವರ್ಗಗಳ ಹಲವು ಹುದ್ದೆಗಳು ಖಾಲಿ ಇವೆ.
ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್ ನೋಡಿ: www.ssc.nic.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.