ಹಾಜರಾತಿ ಕಡಿಮೆಯಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಿದ್ದರೂ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
ಕೋವಿಡ್ ಕಾರಣದಿಂದ ಶಾಲೆಗಳು ತಡವಾಗಿ ಆರಂಭವಾಗಿರುವುದು ಮತ್ತು ಪ್ರಸ್ತುತ ವರ್ಷ ಹಾಜರಾತಿ ಕಡ್ಡಾಯವಲ್ಲ ಎಂದು ಇಲಾಖೆಯೇ ಆದೇಶಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಆರ್‌ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತು ನಿಯಮದಲ್ಲಿ ಸಡಿಲಿಕೆ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
‘ಖಾಸಗಿ ಅನುದಾನ ರಹಿತ ಶಾಲೆಗಳ ಹಿತವನ್ನು ಕಾಯುವ ಉದ್ದೇಶದಿಂದ ಈ ವಿನಾಯಿತಿಯನ್ನು ನೀಡಲಾಗಿದೆ. ಆದರೆ, ಆರ್‌ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಉಳಿದ ಷರತ್ತುಗಳನ್ನು ಖಚಿತಪಡಿಸಿಕೊಂಡು ಕ್ರಮಕೈಗೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.