ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ: ಪ್ರತಿ ಕೊಠಡಿಗೂ ಗಡಿಯಾರ

Last Updated 21 ಫೆಬ್ರವರಿ 2023, 21:45 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆಗಳನ್ನು ಆರಂಭಿಸಿದ್ದು, ಪ್ರತಿ ಪರೀಕ್ಷಾ ಕೊಠಡಿಗೂ ಗೋಡೆ ಗಡಿಯಾರ ಅಳವಡಿಸಲಾಗುತ್ತಿದೆ.

‘ಮಾರ್ಚ್ 9ರಿಂದ ಏ. 15ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಎಲ್ಲ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳಲು ಸೂಚಿಸಲಾಗಿದೆ. ಹಿಂದೆ ನಕಲು ಮಾಡಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸಲಾಗುತ್ತಿದೆ’ ಎಂದು ಮಂಗಳವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆಯ ಬಳಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು. ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ನಿಗಾ ಇರಿಸಲು ಸೈಬರ್‌ಕ್ರೈಂ ಅಧಿಕಾರಿಗಳು, ಸ್ಥಳೀಯ ಪೊಲೀಸರು, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗುತ್ತಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಒದಗಿಸಲಾಗುತ್ತದೆ.

ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್‌, ಇಯರ್‌ ಫೋನ್ ಸೇರಿ ಎಲ್ಲ ಎಲೆಕ್ಟ್ರಾನಿಕ್ಸ್ ಸಾಧನ ನಿಷೇಧಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ, ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ, ಸಿಬ್ಬಂದಿ ಮೊಬೈಲ್‌ ಫೋನ್ ಬಳಸುವಂತಿಲ್ಲ. ಮೇಲ್ವಿಚಾರಕರು ಕ್ಯಾಮೆರಾ ಸೌಲಭ್ಯ ಇಲ್ಲದ ಮೊಬೈಲ್‌ಫೋನ್ ಬಳಸಬಹುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT