ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ನೋಂದಣಿಗೆ ಅವಧಿ ವಿಸ್ತರಣೆ

Published 26 ಮೇ 2023, 23:45 IST
Last Updated 26 ಮೇ 2023, 23:45 IST
ಅಕ್ಷರ ಗಾತ್ರ

ಬೆಂಗಳೂರು: ಹಾಜರಾತಿ ಕೊರತೆಯಿಂದ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯಿಂದ ವಂಚಿತವಾಗಿದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದ್ದು, ಹೆಸರು ನೋಂದಣಿಗೆ ಮೇ 29ರ ಸಂಜೆ 5.30ರ ತನಕ ಅವಕಾಶ ನೀಡಲಾಗಿದೆ.

2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದ 26,500 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಖಾಸಗಿ ವಿದ್ಯಾರ್ಥಿಗಳಾಗಿ ಪರೀಕ್ಷೆ ಬರೆಯಲು ಹೆಸರು ನೋಂದಣಿಗೆ ಮೇ 26ರ ತನಕ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಶಾಲಾ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕ (ಪರೀಕ್ಷೆ) ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT