ಮಂಡ್ಯ: ‘ಭಕ್ತಿಯೊಂದಿಗೆ ಜ್ಞಾನ ಗಳಿಕೆಗೂ ಆದ್ಯತೆ ನೀಡಬೇಕು. ದೇವರ ಮನೆ ಪಕ್ಕ ಗ್ರಂಥಾಲಯ ನಿರ್ಮಿಸಿಕೊಳ್ಳಬೇಕು’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಸಲಹೆ ನೀಡಿದರು.

ಇಲ್ಲಿನ ಶಂಕರ ನಗರದ ಲೇಖಕ ಚಂದ್ರಶೇಖರ ದ.ಕೋ.ಹಳ್ಳಿ ಅವರ ನಿವಾಸದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬರೂ ಪ್ರತಿದಿನ 10 ನಿಮಿಷವಾದರೂ ಪುಸ್ತಕಗಳನ್ನು ಓದಬೇಕು. ಮನಸ್ಸಿನ ಒತ್ತಡವನ್ನು ತೊಡೆದುಹಾಕುವ ಶಕ್ತಿ ಪುಸ್ತಕಗಳಿಗಿವೆ’ ಎಂದರು.

ಕವಯತ್ರಿ ಎಚ್.ಆರ್.ಕನ್ನಿಕಾ, ಶಿಕ್ಷಕ ಕೊತ್ತತ್ತಿ ರಾಜು ಮಾತನಾಡಿದರು. ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಕಾರಸವಾಡಿ ಮಹದೇವ ಅಧ್ಯಕ್ಷತೆ ವಹಿಸಿದ್ದರು.

ಸಮಿತಿಯ ಸದಸ್ಯೆ ಎಂ.ಕೆಂಪಮ್ಮ, ಪ್ರಕಾಶಕರಾದ ಮಂಜು ಮುತ್ತೇಗೆರೆ, ಶಿವಕುಮಾರ ಆರಾಧ್ಯ, ಸದ್ದಾಂ ತಗ್ಗಹಳ್ಳಿ, ಕರ್ನಾಟಕ ಜಾನಪದ ಅಕಾಡೆಮಿ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್, ಸಂಘಟಕ ಕೀಲಾರ ಕೃಷ್ಣೇಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-1254145350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.