ಗುಡಗೇರಿ: ‘ಹದಿಹರೆಯವು ವಿದ್ಯಾರ್ಥಿ ಜೀವನದ ಸಂಕ್ರಮಣ ಕಾಲ’ ಎಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಹೇಳಿದರು.

ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪ ಈಚೆಗೆ ಆಯೋಜಿಸಿದ್ದ ‘ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರೋಪಾಯ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಹದಿಹರೆಯದಲ್ಲೇ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಈ ಅವಧಿಯಲ್ಲಿ ಭಾವನಾತ್ಮಕ, ದೈಹಿಕ ಹಾಗೂ ಮಾನಸಿಕವಾಗಿ ಬದಲಾವಣೆಗಳಾಗಿ ಸಿಟ್ಟು, ಖಿನ್ನತೆ, ಆತಂಕ, ಲೈಂಗಿಕ ಆಕರ್ಷಣೆ, ಹತಾಶ ಮನೋಭಾವ ಉಂಟಾಗುವುದು ಸಹಜ’ ಎಂದರು.

‘ತಾವು ಕಂಡ ಕನಸು ನನಸಾಗದೇ ಇದ್ದರೆ ದುಶ್ಚಟಗಳಿಗೆ ಬಲಿಯಾಗಬಹುದು. ಸಮೂಹ ಮಾಧ್ಯಮಗಳೂ ಸಹ ವಿದ್ಯಾರ್ಥಿಗಳ ಮನಸ್ಸನ್ನು ಕಲ್ಮಶಗೊಳಿಸುತ್ತವೆ. ಓದಿನಲ್ಲಿ ಆಸಕ್ತಿ ಕಡಿಮೆಯಾಗಿ ಏಕಾಗ್ರತೆಗೆ ಭಂಗ ಉಂಟಾಗುತ್ತದೆ. ಈ ದೆಸೆಯಲ್ಲಿ ಪೋಷಕರು ಹಾಗೂ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದರು.

ಸಂಶಿ ಕೆ.ಎಲ್.ಇ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಮೇಶ ಅತ್ತಿಗೇರಿ ಮಾತನಾಡಿ, ‘ಹದಿಹರೆಯದಲ್ಲಿ ಎಂತಹ ಸಮಸ್ಯೆ ಎದುರಾದರೂ ಧೃತಿಗೆಡದೇ ಸಮರ್ಥವಾಗಿ ಎದುರಿಸಬೇಕು’ ಎಂದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಪ್ಪಣ್ಣ ಹುಂಡೇಕಾರ ಉದ್ಘಾಟಿಸಿದರು.

ಪ್ರಾಚಾರ್ಯ ಗಂಗಾಧರ ಗುಮ್ಮಗೋಳಮಠ ಅಧ್ಯಕ್ಷತೆ ವಹಿಸಿದ್ದರು. ಶಂಭಯ್ಯ ಹಿರೇಮಠ, ಹನುಮಂತ ಕಲ್ಲೋಳಿಕರ, ದೇವರಾಜು, ಚೇತನಾ, ಸಂಗಮೇಶ ಬಸರಕೋಡ, ಮೆಹಬೂಬ ಶೇಖ, ವೀರೇಶ ಶಹಪೂರಕರ, ವೈ.ಎಚ್. ಬೀರಣ್ಣವರ, ವೀರಣ್ಣ ಒಡ್ಡೀನ, ಭೀಮೇಶ ಯರಡೋಣಿ, ಬಿ.ಸಿ. ಅಮಾತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-24-1962268238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.