ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ: ವಿದ್ಯಾರ್ಥಿ ವೈತನ ಕೈಪಿಡಿ

Last Updated 18 ಜುಲೈ 2022, 1:42 IST
ಅಕ್ಷರ ಗಾತ್ರ

ಅತುಲ್ ಮಹೇಶ್ವರಿ ಛಾತ್ರವೃತ್ತಿ 2022
ವಿವರ:ಉತ್ತಮ ಭವಿಷ್ಯವನ್ನು ಸೃಷ್ಟಿಸುವ ಉದ್ದೇಶದೊಂದಿಗೆ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಮರ್ ಉಜಾಲಾ ಫೌಂಡೇಶನ್‌ನಿಂದ ಒಂದು ಅವಕಾಶವಾಗಿದೆ. ಸರ್ಕಾರಿ ಸಂಸ್ಥೆಗಳಿಂದ ತಮ್ಮ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಅರ್ಹತೆ: ತಮ್ಮ ಕೊನೆಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಮತ್ತು 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವ, ವಾರ್ಷಿಕ ₹ 1.5 ಲಕ್ಷಕ್ಕಿಂತ ಕಡಿಮೆ ಕುಟುಂಬದ ಆದಾಯ ಇರುವ ಅಭ್ಯರ್ಥಿಗಳಿಗೆ ಮುಕ್ತವಾಗಿದೆ.

ಆರ್ಥಿಕ ನೆರವು: ₹ 50,000
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆ ದಿನ:31-08-2022
ಹೆಚ್ಚಿನ ಮಾಹಿತಿಗೆ: www.b4s.in/praja/AMC9

ರೋಲ್ಸ್-ರಾಯ್ಸ್ ಉನ್ನತಿ ಸ್ಕಾಲರ್‌ಶಿಪ್ಸ್ ಫಾರ್ ವಿಮೆನ್ ಎಂಜಿನಿಯರಿಂಗ್ ಸ್ಟುಡೆಂಟ್ಸ್ 2022

ವಿವರ:ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಥಿವೇತನವು, ತಮ್ಮ ಎಂಜಿನಿಯರಿಂಗ್ ಕಾರ್ಯಕ್ರಮವನ್ನು ಪೂರ್ಣಗೊಳಿಸುವಲ್ಲಿ ಪ್ರತಿಭಾನ್ವಿತ ಹುಡುಗಿಯರನ್ನು ಆರ್ಥಿಕವಾಗಿ ಬೆಂಬಲಿಸುವ ಉದ್ದೇಶವನ್ನು ಹೊಂದಿದೆ.

ಅರ್ಹತೆ:ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಏರೋಸ್ಪೇಸ್, ಮೆರೈನ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ಸ್ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಸ್ತುತ 1ನೇ/2ನೇ/3ನೇ ವರ್ಷದ ಎಂಜಿನಿಯರಿಂಗ್‌ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಭಾರತೀಯ ಹುಡುಗಿಯರಿಗೆ ಮುಕ್ತವಾಗಿದೆ. ಅರ್ಜಿದಾರರು ತಮ್ಮ 10 ಮತ್ತು 12ನೇ ಬೋರ್ಡ್ ಪರೀಕ್ಷೆಗಳಲ್ಲಿ 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.

ಆರ್ಥಿಕ ನೆರವು: ₹ 35,000
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ
ಅರ್ಜಿ ಸಲ್ಲಿಕೆಗೆ ಕೊನೆ ದಿನ: 1–08–2022
ಕೃಪೆ: www.b4s.in/praja/UNS

ದ ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ಶಿಪ್ ಪ್ರೋಗ್ರಾಂ
ವಿವರ: ಟಾಟಾ ಕ್ಯಾಪಿಟಲ್ ಲಿಮಿಟೆಡ್ 6 ರಿಂದ 12ನೇ ತರಗತಿ ಮತ್ತು ಪದವಿಪೂರ್ವ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ವಿದ್ಯಾರ್ಥಿವೇತನವು, ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶವನ್ನು ಹೊಂದಿದೆ.

ಅರ್ಹತೆ:ಭಾರತೀಯ ಪ್ರಜೆಗಳಿಗೆ ಮಾತ್ರ ಮುಕ್ತವಾಗಿದೆ. ಅರ್ಜಿದಾರರು 6ರಿಂದ 12ನೇ ತರಗತಿ ಮತ್ತು ಪದವಿಪೂರ್ವ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್‌ಗಳಲ್ಲಿ ಓದುತ್ತಿರಬೇಕು. ಅವರು ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇ 60 ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 4,00,000 ಮೀರಬಾರದು.

ಆರ್ಥಿಕ ನೆರವು: ಶೇ 80ರಷ್ಟು ಬೋಧನಾ ಶುಲ್ಕದವರೆಗೆ
ಅರ್ಜಿ ಸಲ್ಲಿಕೆಗೆ ಕೊನೆದಿನ: 31-08-2022
ಅರ್ಜಿಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ
ಮಾಹಿತಿಗೆ: www.b4s.in/praja/TCPS14
ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT